ಕಡಬ (ದ.ಕ.):ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಆಗುತ್ತಿರುವ ಹಿನ್ನೆಲೆ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ತೈಲ ಬೆಲೆ ಏರಿಕೆ ಖಂಡಿಸಿ ಕಡಬ ಬ್ಲಾಕ್ ಕಾಂಗ್ರೆಸ್ ಮುಷ್ಕರ - kadaba Block Congress
ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಘಟಕ ರಾಜ್ಯಾದ್ಯಂತ ಇಂದು ಪ್ರತಿಭಟನೆ ನಡೆಸಿತು. ಇದನ್ನು ಬೆಂಬಲಿಸಿ ಕಡಬ ಕಾಂಗ್ರೆಸ್ ಘಟಕ ಸಹ ಧರಣಿ ನಡೆಸಿ, ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿತು.
![ತೈಲ ಬೆಲೆ ಏರಿಕೆ ಖಂಡಿಸಿ ಕಡಬ ಬ್ಲಾಕ್ ಕಾಂಗ್ರೆಸ್ ಮುಷ್ಕರ Kadaba Black Block Congress appeals to the President for price hike](https://etvbharatimages.akamaized.net/etvbharat/prod-images/768-512-7825165-467-7825165-1593453079330.jpg)
ಬೆಲೆ ಏರಿಕೆ ಖಂಡಿಸಿ ರಾಷ್ಟ್ರಪತಿಗಳಿಗೆ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮನವಿ
ಮನವಿ ನೀಡಿ ಬಳಿಕ ಮಾತನಾಡಿದ ಪಕ್ಷದ ಮುಖಂಡ ಡಾ. ಬಿ. ರಘು ಅವರು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿತ ಕಂಡಿದೆ. ದೇಶದಲ್ಲಿ ಮಾತ್ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಕೊರೊನಾ ವೈರಸ್ ನಂತಹ ಸಂದರ್ಭದಲ್ಲಿ ಇದನ್ನು ಮರೆಮಾಚಲು ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.
ಬಳಿಕ ಕಡಬ ತಾಲೂಕು ತಹಶೀಲ್ದಾರ್ ಜಾನ್ ಪ್ರಕಾಶ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ವೇಳೆ ಜಿಲ್ಲಾ, ತಾಲೂಕು, ಪಂಚಾಯಿತಿ ಸದಸ್ಯರು ಸೇರಿದಂತೆ ಪಕ್ಷದ ಪ್ರಮುಖರು ಭಾಗವಹಿಸಿದ್ದರು.