ಕರ್ನಾಟಕ

karnataka

ETV Bharat / state

ಕಡಬ: ಗ್ರಾ.ಪಂ ಅಧ್ಯಕ್ಷರ ಏಕಪಕ್ಷಿಯ ನಿರ್ಧಾರ ಆರೋಪ, ಕೈ ಪಕ್ಷಕ್ಕೆ ಮೂವರು ಗುಡ್‌ಬೈ - ಕಾಂಗ್ರೆಸ್ ಬೆಂಬಲಿತ ಸದಸ್ಯರು ಪಕ್ಷಕ್ಕೆ ರಾಜೀನಾಮೆ

ಗ್ರಾ.ಪಂ ಅಧ್ಯಕ್ಷರು ಏಕಪಕ್ಷಿಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿರುವುದರಿಂದ ಬೇಸರಗೊಂಡ ಮೂವರು ಸದಸ್ಯರು ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

kn_dk_01
ರಾಜೀನಾಮೆ ನೀಡಿದ ಪಕ್ಷದ ಸದಸ್ಯರು

By

Published : Sep 16, 2022, 1:19 PM IST

ಕಡಬ:ಐತ್ತೂರು ಗ್ರಾ.ಪಂ ಅಧ್ಯಕ್ಷರು ತಮ್ಮದೇ ಬೆಂಬಲಿತ ಪಕ್ಷದ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷಿಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ, ಮೂರು ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ಪತ್ರವನ್ನು ಈಗಾಗಲೇ ಬ್ಲಾಕ್​ ಕಾಂಗ್ರೆಸ್ ಅಧ್ಯಕ್ಷರಿಗೆ ಕಳುಹಿಸಿ ಕೊಟ್ಟಿದ್ದು, ಐತ್ತೂರು ಗ್ರಾ.ಪಂ ಅಧ್ಯಕ್ಷರಾದ ಶ್ಯಾಮಲ ಅವರು ಕಾಂಗ್ರೆಸ್ ಪಕ್ಷದ ಬೆಂಬಲಿತರಾಗಿದ್ದರೂ ಪಂಚಾಯತ್​ನಲ್ಲಿ ಅವರು ಏಕಪಕ್ಷಿಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ನಾವು ನಾಲ್ಕೈದು ತಿಂಗಳ ಹಿಂದೆಯೇ ನಿಮ್ಮ ಗಮನಕ್ಕೆ ತಂದಿದ್ದು, ತಾವು ಸುಂಕದಕಟ್ಟೆಯಲ್ಲಿ ಐದು ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಸೇರಿಸಿ ಮಾತುಕತೆ ನಡೆಸಿ, ಎಲ್ಲ ಪಂಚಾಯತ್ ಸದಸ್ಯರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಬೇಕೆಂದು ಸೂಚನೆ ನೀಡಿದ್ದೀರಿ.

ಆದರೆ, ನಿಮ್ಮ ಮಾತನ್ನು ಪಂಚಾಯತ್ ಅಧ್ಯಕ್ಷರು ನಡೆಸಿಕೊಟ್ಟಿಲ್ಲ. ಬಳಿಕ ಒಂದು ಘಟನೆಯಲ್ಲಿ ಅಧ್ಯಕ್ಷರು ಏಕಪಕ್ಷಿಯವಾಗಿ ವರ್ತಿಸಿದ್ದಾರೆ. ಈ ಹಿನ್ನಲೆಯಲ್ಲಿ ನಾವು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇವೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಕಳುಹಿಸಿರುವ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:ಗುಜರಾತ್​ ಯೂತ್ ಕಾಂಗ್ರೆಸ್ ಅಧ್ಯಕ್ಷ ವಘೇಲಾ ರಾಜೀನಾಮೆ

ABOUT THE AUTHOR

...view details