ಕರ್ನಾಟಕ

karnataka

ETV Bharat / state

ಕಡಬ ಪೊಲೀಸ್ ಪೇದೆ ಲೈಂಗಿಕ ದೌರ್ಜನ್ಯ ಪ್ರಕರಣ : ಸಿಎಂ ಮತ್ತು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು - ಕಡಬ ಪೊಲೀಸ್ ಸಿಬ್ಬಂದಿಯ ಲೈಂಗಿಕ ದೌರ್ಜನ್ಯ

ನಾನು ಮದುವೆಯಾಗುವುದಿಲ್ಲ, ಗರ್ಭಿಣಿ ಆಗಿದ್ದರೆ ಅದನ್ನು ಅಬಾರ್ಷನ್ ಮಾಡಿಸುತ್ತೇನೆ. ಅದಕ್ಕೆ ತಗಲುವ ಖರ್ಚು ಕೊಡುತ್ತೇನೆ ಎಂದು ಹೇಳಿದ್ದ. ಇದಕ್ಕೆ ನಾನು ನೀನು ಖರ್ಚು ಕೊಡುವುದು ಬೇಡ, ಅಬಾರ್ಷನ್ ಮಾಡಿಸುವುದೂ ಬೇಡ ಎಂದು ಹೇಳಿದ್ದೆ. ಆ ಬಳಿಕ ನಾನು ತುಂಬಾ ಆಘಾತಗೊಳಗಾಗಿದ್ದೆ. ಹೀಗಿರುವಾಗ 18-9-2021ರಂದು ನನ್ನ ಹೆಂಡತಿ ಹಾಗೂ ಮಗಳು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ಮನೆಗೆ ಬಂದಿಲ್ಲ..

ಕಡಬ ಪೊಲೀಸ್ ಸಿಬ್ಬಂದಿಯ ಲೈಂಗಿಕ ದೌರ್ಜನ್ಯ ಪ್ರಕರಣ
ಕಡಬ ಪೊಲೀಸ್ ಸಿಬ್ಬಂದಿಯ ಲೈಂಗಿಕ ದೌರ್ಜನ್ಯ ಪ್ರಕರಣ

By

Published : Sep 27, 2021, 5:04 PM IST

ಕಡಬ :ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ತೆಯಾಗಿದ್ದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಡಬ ಠಾಣೆಯ ಪೊಲೀಸ್ ಪೇದೆಯೊಯೊಬ್ಬರ ವಿರುದ್ಧ ಕೊನೆಗೂ ದೂರು ದಾಖಲಾಗಿದೆ. ಮುಖ್ಯಮಂತ್ರಿಗಳಿಗೂ ಹಾಗೂ ಕಡಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಡಬ ಪೊಲೀಸರಿಗೆ ಯುವತಿ ತಂದೆ ದೂರು ನೀಡಿದ್ದು, ತನ್ನ ಮಗಳನ್ನು ಪೊಲೀಸ್ ಸಿಬ್ಬಂದಿಯೊಬ್ಬ ಬಲತ್ಕಾರದಿಂದ ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದಾನೆ. ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು ಮಂಗಳೂರಿನಲ್ಲಿ ಎಲ್ಲೋ ಅಜ್ಞಾತ ಸ್ಥಳದಲ್ಲಿರಿಸಿದ್ದಾನೆ.

ಅಲ್ಲದೆ ಗರ್ಭಪಾತ ಮಾಡಿಸಲು ಹಣವನ್ನು ಕೂಡ ಆ ಪೊಲೀಸ್‌ ಪೇದೆ ನೀಡಿದ್ದಾನೆ ಎಂದು ಅವರು ದೂರಿನಲ್ಲಿ ವಿವರಿಸಿದ್ದಾರೆ. ಇತ್ತ ಬೆಂಗಳೂರಿನಲ್ಲಿ ನೀತಿ ಸಾಮಾಜಿಕ ಸಂಘಟನೆ ಮುಖ್ಯಮಂತ್ರಿಗಳಿಗೂ ಈ ಬಗ್ಗೆ ದೂರನ್ನು ನೀಡಿದೆ.

ಯುವತಿಯ ತಂದೆ ನೀಡಿರುವ ದೂರಿನ ಸಾರಾಂಶ :ನಾನು ಹಾಗೂ ನನ್ನ ಪತ್ನಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ಎರಡು ವರ್ಷಗಳ ಹಿಂದೆ ನನ್ನ ಮಗಳು ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯಾಗಿದ್ದು, ಆ ಪ್ರಕರಣ ಆರು ತಿಂಗಳ ಹಿಂದೆ ಮುಗಿದಿದೆ ಅಷ್ಟೇ.. ಈ ಪ್ರಕರಣಕ್ಕೆ ಸಂಬಂಧಿಸಿ ಕಡಬ ಠಾಣೆಯ ಪೊಲೀಸ್ ಸಿಬ್ಬಂದಿ ಯಾವುದೋ ದಾಖಲೆ, ಸಮನ್ಸ್ ನೀಡುವ ವಿಚಾರಕ್ಕೆ ಮನೆಗೆ ಬರುತ್ತಿದ್ದ. ಆಗ ಪರಿಚಯಸ್ಥನಾಗಿದ್ದ.

ಪ್ರಕರಣ ಮುಗಿದಿದ್ದರೂ ಸಿಬ್ಬಂದಿ ಬೇರೆ ಬೇರೆ ನೆಪವೊಡ್ಡಿ ಮನೆಗೆ ಬರುತ್ತಿರುವುದು ನನ್ನ ಗಮನಕ್ಕೆ ಬಂದಿತ್ತು. ಆದರೆ, ನನಗೆ ಇಂತಹ ಕೆಟ್ಟ ಚಾಳಿ ಇರುವುದು ನನ್ನ ಗಮನಕ್ಕೆ ಬಂದಿರುವುದಿಲ್ಲ. ಆದರೆ, ಇತ್ತೀಚೆಗೆ ದೈಹಿಕ ಬೆಳವಣಿಗೆಯಲ್ಲಿ ಏರುಪೇರಾಗಿ ಮಗಳು ಗರ್ಭಿಣಿ ಆಗಿರುವುದು ತಿಳಿದು ಬಂದಿದೆ.

ಮಗಳನ್ನು ವಿಚಾರಿಸಿದಾಗ ಕಡಬ ಪೊಲೀಸ್ ಸಿಬ್ಬಂದಿ ನನ್ನನ್ನು ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಆದುದರಿಂದ ನನಗೆ ಐದೂವರೆ ತಿಂಗಳು ಆಗಿದೆ ಎಂದು ಆಕೆ ಬಾಯಿ ಬಿಟ್ಟಿದ್ದಳು. ಇದೇ ವೇಳೆ ನಾನು ಸಿಬ್ಬಂದಿಯನ್ನ ಸಂಪರ್ಕ ಮಾಡಿ ನನ್ನ ಮಗಳನ್ನು ಮದುವೆಯಾಗು ಎಂದು ಹೇಳಿದ್ದೆ.

ಆ ವೇಳೆ ನಾನು ಮದುವೆಯಾಗುವುದಿಲ್ಲ, ಗರ್ಭಿಣಿ ಆಗಿದ್ದರೆ ಅದನ್ನು ಅಬಾರ್ಷನ್ ಮಾಡಿಸುತ್ತೇನೆ. ಅದಕ್ಕೆ ತಗಲುವ ಖರ್ಚು ಕೊಡುತ್ತೇನೆ ಎಂದು ಹೇಳಿದ್ದ. ಇದಕ್ಕೆ ನಾನು ನೀನು ಖರ್ಚು ಕೊಡುವುದು ಬೇಡ, ಅಬಾರ್ಷನ್ ಮಾಡಿಸುವುದೂ ಬೇಡ ಎಂದು ಹೇಳಿದ್ದೆ. ಆ ಬಳಿಕ ನಾನು ತುಂಬಾ ಆಘಾತಗೊಳಗಾಗಿದ್ದೆ. ಹೀಗಿರುವಾಗ 18-9-2021ರಂದು ನನ್ನ ಹೆಂಡತಿ ಹಾಗೂ ಮಗಳು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ಮನೆಗೆ ಬಂದಿಲ್ಲ.

ಪತ್ನಿ ನನಗೆ ಫೋನ್ ಮಾಡುತ್ತಾಳೆ. ಆದರೆ, ಎಲ್ಲಿದ್ದೇನೆ ಎಂದು ಹೇಳುತ್ತಿಲ್ಲ, ಅಬಾರ್ಷನ್ ಮಾಡಲಾಗಿದೆ. ಅದಕ್ಕೆ 35,000/-ನ್ನು ಆತ ಆನ್​ಲೈನ್​ಲ್ಲಿ ಹಣ ಕಳಿಸಿದ್ದಾನೆ. ನಾವು ಒಂದು ಕಡೆ ಇದ್ದೇವೆ, ಎಲ್ಲಿ ಅಂತಾ ಹೇಳುವುದಿಲ್ಲ ಎಂದು ನನ್ನ ಪತ್ನಿ ಹೇಳುತ್ತಿದ್ದಾಳೆ.

ಆದುದರಿಂದ ಅತ್ಯಾಚಾರ ಎಸಗಿರುವ ಸಿಬ್ಬಂದಿಯ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಮತ್ತು ನನ್ನ ಮಗಳು ಹಾಗೂ ಪತ್ನಿಯನ್ನು ಆತ ಮಂಗಳೂರಿನ ಎಲ್ಲಿಯೋ ಅಜ್ಞಾತ ಸ್ಥಳದಲ್ಲಿರಿಸಿದ್ದು, ಅವರನ್ನು ಪತ್ತೆ ಹಚ್ಚಬೇಕು. ಇದೆಲ್ಲಾ ಮಾಡಿ ಪೊಲೀಸ್ ಪ್ರಭಾವ ಬಳಸಿ ನಮ್ಮನ್ನು ಬೆದರಿಸುತ್ತಿರುವ ಆತನನ್ನು ವಿಚಾರಣೆ ನಡೆಸಿ ನನ್ನ ಮಗಳಿಗೆ ಆಗಿರುವ ಅನ್ಯಾಯಕ್ಕೆ ಸೂಕ್ತ ನ್ಯಾಯ ಕೊಡಿಸಬೇಕು ಎಂದು ಅವರು ವಿನಂತಿಸಿದ್ದಾರೆ.

ಈ ಮಧ್ಯೆ ಆರೋಪಿಯನ್ನು ಅಮಾನತುಗೊಳಿಸಿ ಕ್ರಮಕೈಗೊಳ್ಳದಿದ್ದರೆ, ಉಗ್ರ ಹೋರಾಟ ನಡೆಸಲಾಗುವುದು. ಇನ್ನಾದರೂ ಕ್ರಮಕೈಗೊಳ್ಳಬಹುದಲ್ವೇ ಎಂದು ವಿಹಿಂಪ ಜಿಲ್ಲಾ ಕಾರ್ಯದರ್ಶಿ ಭಾಸ್ಕರ್ ಧರ್ಮಸ್ಥಳ, ಕಡಬ ಪ್ರಖಂಡ ಅಧ್ಯಕ್ಷ ರಾಧಾಕೃಷ್ಣ , ಕಾರ್ಯದರ್ಶಿ ಪ್ರಮೋದ್ ರೈ ಅವರು ಎಚ್ಚರಿಸಿದ್ದಾರೆ.

For All Latest Updates

TAGGED:

KDB

ABOUT THE AUTHOR

...view details