ಮಂಗಳೂರು:ಬಿ.ವಿ.ಕಕ್ಕಿಲ್ಲಾಯ ಶತಾಬ್ದಿ ಕಾರ್ಯಕ್ರಮದ ಅಂಗವಾಗಿ ಭಾರತೀಯ ಕಮ್ಯುನಿಸ್ಟ್ ಪಕ್ಷದ ಯುವನಾಯಕ ಹಾಗೂ ಜೆಎನ್ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಡಾ.ಕನ್ಹಯ್ಯ ಕುಮಾರ್ ಜಿಲ್ಲೆಗೆ ಬಂದಿರುವುದನ್ನು ವಿರೋಧಿಸಿ, ಘೋಷಣೆ ಕೂಗಿ ಪ್ರತಿಭಟನೆಗೆ ಯತ್ನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಕನ್ಹಯ್ಯ ಮಂಗಳೂರು ಭೇಟಿ ವಿರೋಧಿಸಿ ಪ್ರತಿಭಟನೆ: 20ಕ್ಕೂ ಹೆಚ್ಚು ಕಾರ್ಯಕರ್ತರ ವಶಕ್ಕೆ ಪಡೆದ ಪೊಲೀಸ್ - ಕನ್ಹಯ್ಯ ಕುಮಾರ್
ಕನ್ಹಯ್ಯ ಕುಮಾರ್ ಮಂಗಳೂರಿಗೆ ಬಂದಿರುವುದನ್ನು ವಿರೋಧಿಸಿ, ಘೋಷಣೆ ಕೂಗಿ ಪ್ರತಿಭಟನೆಗೆ ಯತ್ನಿಸಿದ ಹಿಂದೂ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ಏಕೀಕರಣ ಚಳವಳಿಯ ನಾಯಕ ಬಿ.ವಿ.ಕಕ್ಕಿಲ್ಲಾಯ ಅವರ ಜನ್ಮ ಶತಾಬ್ದಿ ಕಾರ್ಯಕ್ರಮವನ್ನು ನಗರದ ಬಲ್ಮಠದ ಬಳಿ ಇರುವ ಸಹೋದಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಚಿಂತಕರಾಗಿ ಭಾಗವಹಿಸಲು ಡಾ.ಕನ್ಹಯ್ಯ ಕುಮಾರ್ ಆಗಮಿಸಿದ್ದರು. ಅವರು ಭಾಷಣ ಮಾಡಲು ಆರಂಭಿಸುತ್ತಿದ್ದಂತೆ ಎಬಿವಿಪಿ ಕಾರ್ಯಕರ್ತರಲ್ಲಿ ನಾಲ್ಕಾರು ಮಂದಿ ಸಭಾಂಗಣ ಪ್ರವೇಶಿಸಿದರು, ಈ ಸಂದರ್ಭ ಪೊಲೀಸರು ಅವರನ್ನು ತಡೆದು, ವಶಕ್ಕೆ ಪಡೆದರು.
ಸಭಾಂಗಣದ ಹೊರಗೆ ಜಮಾಯಿಸಿದ್ದ, ಶ್ರೀರಾಮ ಸೇನೆ, ಹಿಂದೂ ಜಾಗರಣ ವೇದಿಕೆ ಹಾಗೂ ಎಬಿವಿಪಿ ಕಾರ್ಯಕರ್ತರು ಅವರ ವಿರುದ್ಧ ಘೋಷಣೆ ಕೂಗಿದರು. ಈ ಹಿನ್ನೆಲೆಯಲ್ಲಿ ಸುಮಾರು 20 ಕ್ಕೂ ಅಧಿಕ ಮಂದಿ ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.