ಕರ್ನಾಟಕ

karnataka

ETV Bharat / state

ಅ.23ರಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಲೋಕಾಯುಕ್ತರಿಂದ ಸಾರ್ವಜನಿಕ ದೂರು ಸ್ವೀಕಾರ.. - ಕರ್ನಾಟಕ ಲೋಕಾಯುಕ್ತ

ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರುಗಳು ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡದ ವಿವಿಧ ತಾಲೂಕುಗಳಲ್ಲಿ ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.

ಕರ್ನಾಟಕ ಲೋಕಾಯುಕ್ತರಿಂದ ಮಂಗಳೂರಿನಲ್ಲಿ ಸಾರ್ವಜನಿಕರಿಂದ ದೂರು ಸ್ವೀಕಾರ

By

Published : Oct 16, 2019, 10:54 AM IST

ಮಂಗಳೂರು: ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರುಗಳು ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡದ ವಿವಿಧ ತಾಲೂಕುಗಳಲ್ಲಿ ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.

ಅಕ್ಟೋಬರ್ 23 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ ಹಾಗೂ ಬಂಟ್ವಾಳ ತಾಲೂಕು ಕಚೇರಿ, ಅ.24 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿ, ಅ. 25 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಲಿದ್ದು, ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ. ಮಾತ್ರವಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಾರ್ವಜನಿಕರು ತಮ್ಮ ದೂರುಗಳನ್ನು ನೀಡಬಹುದಾಗಿದೆ. ಮತ್ತು ದೂರವಾಣಿ ಮೂಲಕವು ಲೋಕಾಯುಕ್ತ ಅಧಿಕಾರಿಗಳು ಅಥವಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಅನಾಮಧೇಯ ಅರ್ಜಿಗಳು ಬಂದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲಾಗುವುದಿಲ್ಲ. ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿಡವಿಟ್​ ಮಾಡಿ ಸಲ್ಲಿಸಿದ ಅರ್ಜಿಗಳನ್ನು ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹು ಮಹಡಿಗಳ ಕಟ್ಟಡ, ಡಾ.ಬಿ.ಆರ್. ಅಂಬೇಡ್ಕರ್ ವಿಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : ಪೊಲೀಸ್ ಅಧೀಕ್ಷಕರ ಕಚೇರಿ -0824- 2429197, 9448390987, ಪೊಲೀಸ್ ಉಪಾಧೀಕ್ಷಕರ-1 ಕಚೇರಿ-0824-2453420, 8861688100, 9448530051, ಪೊಲೀಸ್ ಉಪಾಧೀಕ್ಷಕರ-2 ಕಚೇರಿ- 0824-2453420, 7026994128, ಪೊಲೀಸ್ ನಿರೀಕ್ಷಕರ ಕಚೇರಿ- 0824-2427237, 9449044377 ನ್ನು ಸಂಪರ್ಕಿಸಬಹುದು ಎಂಬುದಾಗಿ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

For All Latest Updates

ABOUT THE AUTHOR

...view details