ಮಂಗಳೂರು:ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ಆಡಿಯೋ ವೈರಲ್ ಪ್ರಕರಣದಲ್ಲಿ ಸೂಕ್ತ ಕ್ರಮಕ್ಕೆ ದ.ಕ.ಜಿಲ್ಲೆಯ ಶಾಸಕರು ಮನವಿ ಮಾಡಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಹೇಳಿದರು.
ರಾಜ್ಯ ರಾಜಕಾರಣದಲ್ಲಿ ಹಾಗೂ ಸಿಎಂ ಬದಲಾವಣೆ ವಿಚಾರದಲ್ಲಿ ನಳೀನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ಆಡಿಯೋ ವೈರಲ್ ಆದ ಬಳಿಕ ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಹಾಗೂ ದ.ಕ ಜಿಲ್ಲಾ ಶಾಸಕರು ಪೊಲೀಸ್ ಆಯಕ್ತರ ಕಚೇರಿಗೆ ಆಗಮಿಸಿ ಈ ಬಗ್ಗೆ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದ್ದರು.