ಕರ್ನಾಟಕ

karnataka

ETV Bharat / state

ಕಟೀಲು ಮೇಳದಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನಕ್ಕೆ ನಿರ್ಧಾರ - Etv Bharat Kannada

ರಾಜ್ಯ ಸರ್ಕಾರವು ರಾತ್ರಿ 10.30 ರಿಂದ 50 ಡೆಸಿಬಲ್‌ಗಿಂತ ಹೆಚ್ಚಿನ ಧ್ವನಿವರ್ಧಕಗಳನ್ನು ಬಳಸಬಾರದು ಎಂದು ಸೂಚನೆ ನೀಡಿದ್ದು ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಿಂದ ನಡೆಸಲ್ಪಡುವ 6 ಮೇಳಗಳ ಯಕ್ಷಗಾನ ಪ್ರದರ್ಶನದ ಸಮಯವನ್ನು ಸಂಜೆ 5 ಗಂಟೆಯಿಂದ ರಾತ್ರಿ 10.30ರ ವರೆಗೆ ನಡೆಸಲು ಆಡಳಿತ ಮಂಡಳಿ ನಿರ್ಧರಿಸಿದೆ.

Kn_Mng_04_Kateel_Photo_7202146
ಯಕ್ಷಗಾನ

By

Published : Aug 25, 2022, 7:36 PM IST

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ನಡೆಸಲ್ಪಡುವ 6 ಮೇಳಗಳ ಯಕ್ಷಗಾನ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ಬದಲಾಯಿಸುವ ನಿರ್ಣಯವನ್ನು ಆಡಳಿತ ಮಂಡಳಿ ತೆಗೆದುಕೊಂಡಿದೆ.

ರಾಜ್ಯ ಸರ್ಕಾರವು ರಾತ್ರಿ 10.30 ರಿಂದ ಐವತ್ತು ಡೆಸಿಬಲ್‌ಗಿಂತ ಹೆಚ್ಚಿನ ಧ್ವನಿವರ್ಧಕಗಳನ್ನು ಬಳಸಬಾರದು ಎಂದು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಯಕ್ಷಗಾನದ ಪ್ರದರ್ಶನದ ಸಮಯವನ್ನು ಬದಲಾಯಿಸಿ ಸಂಜೆ 5 ಗಂಟೆಯಿಂದ ರಾತ್ರಿ 10.30ರ ತನಕ ಯಕ್ಷಗಾನ ನಡೆಸುವ ಬಗ್ಗೆ ನಿರ್ಣಯಿಸಲಾಗಿದೆ. ಈ ಸಮಯದಲ್ಲಿ ಯಕ್ಷಗಾನ ಪ್ರದರ್ಶನದ ಸ್ವರೂಪ ಮತ್ತು ಚಿಂತನೆಗಳ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರವಾಗಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ಇದನ್ನೂ ಓದಿ:ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​

ABOUT THE AUTHOR

...view details