ಮಂಗಳೂರು: ಮಂಗಳೂರಿನಲ್ಲಿ ಕಿಯೋನಿಸ್ಕ್ ಸಾಫ್ಟ್ವೇರ್ ಪಾರ್ಕ್ ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಸಚಿವ ಸಿ ಎನ್ ಅಶ್ವತ್ಥನಾರಾಯಣ್ ಹೇಳಿದರು.
ರಾಜ್ಯದ ಎರಡು ಮತ್ತು ಮೂರನೇ ಸ್ತರದ ಪ್ರಮುಖ ನಗರಗಳಲ್ಲಿ ಉದ್ಯಮಗಳು ಬೆಳೆಯುವ ಸದುದ್ದೇಶದಿಂದ ರೂಪಿಸಿರುವ ‘ಬಿಯಾಂಡ್ ಬೆಂಗಳೂರು’ ಉಪಕ್ರಮದ ಭಾಗವಾಗಿ ಎರಡು ದಿನಗಳ ಕಾಲ ಮಂಗಳೂರಿನ ಟಿಎಂಎಪೈ ಕನ್ವೆನ್ಷನ್ ಸೆಂಟರ್ನಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಮೂಲಕ ಹಮ್ಮಿಕೊಂಡಿರುವ ‘ಮಂಗಳೂರು ಟೆಕ್ನೋವಾಂಜಾ’ ಸಮಾವೇಶದ ಕಾರ್ಯಗಾರವನ್ನುದ್ದೇಶಿಸಿ ಅವರು ಮಾತನಾಡಿದರು.
ಮಂಗಳೂರಿನಲ್ಲಿ ಶೀಘ್ರದಲ್ಲೇ ಸುಮಾರು 3 ಎಕರೆ ಪ್ರದೇಶದಲ್ಲಿ ಕಿಯೋನಿಸ್ಕ್ ಸಾಪ್ಟ್ವೇರ್ ಪಾರ್ಕ್ ಆರಂಭಿಸಲಾಗುವುದು. ರಾಜ್ಯದಲ್ಲಿ ಬೆಂಗಳೂರು ಹೊರತು ಪಡಿಸಿ, ಮೂರು ಕ್ಲಸ್ಟರ್ಗಳ ಮೂಲಕ ಐಟಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಾಗುವುದು. ಮಂಗಳೂರು-ಬೆಂಗಳೂರು ನಡುವಿನ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವ ಅಗತ್ಯವಿದೆ ಎಂದು ಸಚಿವ ಅಶ್ವತ್ಥನಾರಾಯಣ್ ತಿಳಿಸಿದರು.