ಮಂಗಳೂರು :ಲಾಕ್ಡೌನ್ನಿಂದಾಗಿ ಜನ ಸಂಕಷ್ಟದಲ್ಲಿದ್ದಾರೆ. ಆದರೆ, ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಇಂತಹ ಪ್ರಕ್ರಿಯೆ ಅನಿವಾರ್ಯವಾಗಿದೆ. ಜನರ ಸಹಕಾರ ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು.
ಕೊರೊನಾ ವೈರಸ್ ತಡೆಗೆ ಸಹಕಾರ ನೀಡಿ.. ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ - ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕೊರೊನ ಸುದ್ದಿ
ಲಾಕ್ಡೌನ್ ಪ್ರಯುಕ್ತ ಮಂಗಳೂರು ಕ್ಷೇತ್ರ ಬಿಜೆಪಿ ವತಿಯಿಂದ ಆಹಾರ ಸಾಮಾಗ್ರಿಗಳ ಕಿಟ್ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಜನರು ಕೆಲಸವಿಲ್ಲದೆ ತೊಂದರೆಯಲ್ಲಿದ್ದಾರೆ.
ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಲಾಕ್ಡೌನ್ ಪ್ರಯುಕ್ತ ಮಂಗಳೂರು ಕ್ಷೇತ್ರ ಬಿಜೆಪಿ ವತಿಯಿಂದ ಆಹಾರ ಸಾಮಾಗ್ರಿಗಳ ಕಿಟ್ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಜನರು ಕೆಲಸವಿಲ್ಲದೆ ತೊಂದರೆಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಯಾರೊಬ್ಬರಿಗೂ ಊಟ ಇಲ್ಲದಂತಾಗಬಾರದು ಎನ್ನುವ ಉದ್ದೇಶದಿಂದಾಗಿ ಎಲ್ಲಾ ಕ್ಷೇತ್ರಗಳಿಗೂ ಸಂಸದರು ಕಿಟ್ ವಿತರಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು.
ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್, ಉಳೆಪಾಡಿಗುತ್ತು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.