ಮಂಗಳೂರು: ಮಂಗಳೂರು ಮಹಾ ನಗರ ಪಾಲಿಕೆ ಬಡತನ ನಿರ್ಮೂಲನಾ ಕೋಶದಿಂದ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಮಾತನಾಡಿದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪೌರಕಾರ್ಮಿಕರಿಗೆ ನೀಡುವ ಪ್ರಾಧಾನ್ಯತೆ ಕಡಿಮೆಯಾಗಿದ್ದು, ಈ ಬಗ್ಗೆ ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ಅನೇಕ ಬಾರಿ ಚರ್ಚೆಗಳು ನಡೆದಿತ್ತು. ಈ ಹಿನ್ನೆಲೆಯಲ್ಲಿ ಪೌರಕಾರ್ಮಿಕರ ಕೌಟುಂಬಿಕ ಜೀವನವನ್ನು ಉನ್ನತಿಗೇರಿಸಲು ಅವರಿಗೆ ನಿವೇಶನ ನೀಡಬೇಕು. ಈ ಎಲ್ಲ ಕಾರ್ಯಕ್ರಮಗಳು ಮಂಗಳೂರು ಮನಪಾದಿಂದ ನಡೆದಿದೆ. ಸ್ವಾತಂತ್ರ್ಯ ಬಂದ ಬಳಿಕ ಇಷ್ಟು ವರ್ಷಗಳಾದರೂ ಸರಿಯಾದ ಮೂಲ ಸೌಕರ್ಯಗಳನ್ನು ಹೊಂದಿರದ ಎಷ್ಟೋ ಕುಟುಂಬ ಈಗಲೂ ಇದೆ. ದೇಶದ ಒಟ್ಟು ಸಮಾಜದ ಅಭಿವೃದ್ಧಿ ಆಗಬೇಕಾದಲ್ಲಿ ಕಟ್ಟಕಡೆಯ ವ್ಯಕ್ತಿಯೂ ಸ್ವತಂತ್ರನಾಗಿ ಬದುಕುವ ರೀತಿಯಲ್ಲಿ ಸರಕಾರ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಹೇಳಿದರು.