ಕರ್ನಾಟಕ

karnataka

ETV Bharat / state

ಕೋವಿಡ್ 19 ಭೀತಿ: ಏಳು ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

ಮಂಗಳೂರಿನಲ್ಲಿ ಇಂದು 7 ಮಂದಿಯ ಗಂಟಲು ದ್ರವ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಿದೆ.

Kovid 19
ಕೋವಿಡ್ 19

By

Published : Mar 21, 2020, 9:25 PM IST

ಮಂಗಳೂರು: ಕೋವಿಡ್ 19ರ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 7 ಮಂದಿಯ ಗಂಟಲು ದ್ರವ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಜಿಲ್ಲಾಡಳಿತ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹಿಂದೆ ಕಳುಹಿಸಲಾದ 9 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿ ನೆಗೆಟಿವ್ ಬಂದಿದ್ದು ಯಾರಿಗೂ ಕೊರೊನಾ ಸೋಂಕು ದೃಢಪಟ್ಟಿಲ್ಲ. ಇಂದು ವಿದೇಶದಿಂದ ಬಂದಿದ್ದ 541 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ.

ಈವರೆಗೆ ಒಟ್ಟು 37,494 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಹೋಮ್ ಕ್ವಾರಂಟೈನ್​​​​​ನಲ್ಲಿ 1,987 ಮಂದಿ ಇದ್ದು 20 ಮಂದಿ ಇಎಸ್ಐ ಆಸ್ಪತ್ರೆ ಯಲ್ಲಿ ಕ್ವಾರಂಟೈನ್ ನಲ್ಲಿ ಇದ್ದಾರೆ. ಇಂದಿಗೆ 10 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಜಿಲ್ಲೆಯಲ್ಲಿ 14 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ABOUT THE AUTHOR

...view details