ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಏಳು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಹತ್ತು ಜನರನ್ನೊಳಗೊಂಡ ಮಂಡ್ಯ ಜಿಲ್ಲೆಯ ಕುಟುಂಬವೊಂದು ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೆರೊ ವಾಹನವನ್ನು ರಸ್ತೆಯ ಪಕ್ಕಕ್ಕೆ ನಿಲ್ಲಿಸಿ, ಇಳಿದು ಅಂಗಡಿಗೆ ಹೋಗುತ್ತಿದ್ದರು. ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್, ಬೊಲೆರೊ ವಾಹನಕ್ಕೆ ಹಾಗೂ ರಸ್ತೆ ಪಕ್ಕ ನಿಂತಿದ್ದವರಿಗೆ ಡಿಕ್ಕಿ ಹೊಡೆಯಿತು.