ಕರ್ನಾಟಕ

karnataka

ETV Bharat / state

ಕೆಎಸ್​​ಆರ್​​ಟಿಸಿ ಬಸ್​ ಡಿಕ್ಕಿ : ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು - ಸುಬ್ರಹ್ಮಣ್ಯ

ಸುಬ್ರಹ್ಮಣ್ಯ ಸಮೀಪದ ಕೈಕಂಬದಲ್ಲಿ ನೀರು ತರಲು ರಸ್ತೆಯ ಇನ್ನೊಂದು ಬದಿಯಲ್ಲಿ ತನ್ನ ವಾಹನ ನಿಲ್ಲಿಸಿ, ರಸ್ತೆ ದಾಟುತ್ತಿದ್ದಾಗ ಬಸ್ ಡಿಕ್ಕಿ ಹೊಡೆದಿದೆ..

KSRTC bus collision
ಭೂತೇಶ್ ಪಿ.ಜೆ

By

Published : Feb 1, 2021, 9:05 PM IST

ಸುಬ್ರಹ್ಮಣ್ಯ/ದಕ್ಷಿಣ ಕನ್ನಡ :ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೈಕಂಬ ಎಂಬಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ಕೆಎಸ್​​ಆರ್​​ಟಿಸಿ ಬಸ್​ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಕೆಎಸ್​​ಆರ್​​ಟಿಸಿ ಬಸ್​ ಡಿಕ್ಕಿ.. ಗಾಯಾಳು ಆಸ್ಪತ್ರೆಯಲ್ಲಿ ಸಾವು..

ಭೂತೇಶ್ ಪಿಜೆ ಎಂಬುವರಿಗೆ ಬಸ್ ಡಿಕ್ಕಿ ಹೊಡೆದಿದೆ. ಬೆಂಗಳೂರಿಗೆ ಹೋಗುತ್ತಿರುವ ಕೆಎಸ್​​ಆರ್​​ಟಿಸಿ ಬಸ್‌ ಡಿಕ್ಕಿ ಹೊಡೆದಿದ್ದು, ತಕ್ಷಣ ಚಾಲಕ ಪರಾರಿಯಾಗಿದ್ದಾನೆ. ನಿರ್ವಾಹಕನನ್ನು ಸ್ಥಳೀಯರು ತಡೆದು ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಒತ್ತಾಯಿಸಿದ್ದಾರೆ.

ಅಪಘಾತವಾದ ಸಮಯದಲ್ಲಿ ವ್ಯಕ್ತಿಯ ಸ್ಥಿತಿ ಗಂಭೀರವಾಗಿತ್ತು. ಇದೀಗ ವ್ಯಕಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಭೂತೇಶ್ ಪಿ.ಜೆ ಅವರು ಬೆಂಗಳೂರಿನವರಾಗಿದ್ದು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಯಾತ್ರೆಗೆ ಬಾಡಿಗೆಗೆ ಬಂದಿದ್ದರು ಎನ್ನಲಾಗಿದೆ.

ಸುಬ್ರಹ್ಮಣ್ಯ ಸಮೀಪದ ಕೈಕಂಬದಲ್ಲಿ ನೀರು ತರಲು ರಸ್ತೆಯ ಇನ್ನೊಂದು ಬದಿಯಲ್ಲಿ ತನ್ನ ವಾಹನ ನಿಲ್ಲಿಸಿ, ರಸ್ತೆ ದಾಟುತ್ತಿದ್ದಾಗ ಬಸ್ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಡಬ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಸ್ ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details