ಉಳ್ಳಾಲ: ಕೌಟುಂಬಿಕ ಕಲಹ ಹಿನ್ನೆಲೆ ಕೆಎಸ್ಆರ್ಟಿಸಿ ಕಂಡಕ್ಟರ್ವೋರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡೆತ್ ನೋಟ್ ಬರೆದು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ - ಉಳ್ಳಾಲ ಆತ್ಮಹತ್ಯೆ ಸುದ್ದಿ,
ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ವೋರ್ವ ಡೆತ್ನೋಟ್ ಬರೆದು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಬಂಟ್ವಾಳ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಸ್ ಕಂಡಕ್ಟರ್ ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮೊದಲು ಡೆತ್ನೋಟ್ ಬರೆದಿಟ್ಟು ನೇತ್ರಾವತಿ ನದಿಗೆ ಹಾರಿದ್ದಾರೆ.
ಡೆತ್ನೋಟ್ನಲ್ಲಿ ತನ್ನ ಸಹೋದರನ ವಿರುದ್ಧ ಅಸಮಾಧಾನ ಹೊರಹಾಕಿರುವ ಬಾಲಕೃಷ್ಣ ಅವರು ಕೆಎಸ್ಆರ್ಟಿಸಿ ಸಂಸ್ಥೆಯಲ್ಲಿ ನಿರಂತರ ಕಿರುಕುಳ ನೀಡುತ್ತಿದ್ದ ಬಗ್ಗೆಯೂ ಉಲ್ಲೇಖಿಸಿದ್ದಾರೆ ಎನ್ನಲಾಗ್ತಿದೆ. ಸಂಸ್ಥೆ ತನ್ನನ್ನು ಬದುಕಲು ಬಿಡುತ್ತಿಲ್ಲ, ಅಧಿಕಾರಿಗಳು ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಬರೆದಿರುವ ಅವರು, ನನ್ನ ಮಕ್ಕಳು ಹಾಗು ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಉಲ್ಲೇಖಿಸಿದ್ದಾರೆ.