ಕರ್ನಾಟಕ

karnataka

ETV Bharat / state

ಕೆಎಸ್​ಆರ್​ಟಿಸಿ ಬಸ್​ ಓವರ್​ಟೇಕ್ ಮಾಡಲು ಹೋಗಿ ಕಾರಿ​ಗೆ ಡಿಕ್ಕಿ ಹೊಡೆದ ಖಾಸಗಿ ಬಸ್.... ಕಾರು ಚಾಲಕ ಸ್ಥಳದಲ್ಲೇ ಸಾವು - manglore acciedent news

ಖಾಸಗಿ ಬಸ್​ವೊಂದು ಕೆಎಸ್​ಆರ್​ಟಿಸಿ ಬಸ್​ ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಬಕ ಗ್ರಾಮದ ಪೋಳ್ಯದಲ್ಲಿ ನಡೆದಿದೆ.

ಕೆಎಸ್​ಆರ್​ಟಿಸಿ ಬಸ್​ ಓವರ್​ಟೇಕ್ ಮಾಡಲು ಹೋಗಿ ಕಾರಿ​ಗೆ ಡಿಕ್ಕಿ ಹೊಡೆದ ಖಾಸಗಿ ಬಸ್..ಕಾರು ಚಾಲಕ ಸ್ಥಳದಲ್ಲೆ ಸಾವು

By

Published : Aug 12, 2019, 6:36 PM IST


ಮಂಗಳೂರು: ಖಾಸಗಿ ಬಸ್​ವೊಂದು ಕೆಎಸ್​ಆರ್​ಟಿಸಿ ಬಸ್​ ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಬಕ ಗ್ರಾಮದ ಪೋಳ್ಯದಲ್ಲಿ ನಡೆದಿದೆ.

ಕೆಎಸ್​ಆರ್​ಟಿಸಿ ಬಸ್​ ಓವರ್​ಟೇಕ್ ಮಾಡಲು ಹೋಗಿ ಕಾರಿ​ಗೆ ಡಿಕ್ಕಿ ಹೊಡೆದ ಖಾಸಗಿ ಬಸ್..ಕಾರು ಚಾಲಕ ಸ್ಥಳದಲ್ಲೆ ಸಾವು

ಬಡಗನ್ನೂರಿನ ಅಬ್ದುಲ್ ಹಕೀಂ ಮೃತ ದುರ್ದೈವಿ. ಅಬ್ದುಲ್ ಹಕೀಂ ಈದ್ ಉಲ್ ಫಿತರ್ ಹಬ್ಬದ ನಿಮಿತ್ತ ತಮ್ಮ ಬಂಧುಗಳ ಮನೆಗೆ ಕಾರಿನಲ್ಲಿ ಮಂಗಳೂರಿನಿಂದ ಪುತ್ತೂರು ಕಡೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬಸ್​ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅಪಘಾತ ನಡೆದ ಸ್ಥಳಕ್ಕೆ ಹಲವಾರು ಜನರು ಜಮಾಯಿಸಿದ್ದು, ರೊಚ್ಚಿಗೆದ್ದ ಜನ ಖಾಸಗಿ ಬಸ್​ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸದ್ಯ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಯುವಕನ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಬಳಿಕ ಮೃತದೇಹವನ್ನು ಮನೆಯವರಿಗೆ ರವಾನಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details