ಪುತ್ತೂರು :ದಲಿತ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದ ಆರೋಪಿ ಎಂದು ಬಾಲಕಿ ಹೆಸರಿಸಿರುವ ಕುದ್ಕಾಡಿ ನಾರಾಯಣ ರೈ ಅನಾರೋಗ್ಯ ಕಾರಣ ನೀಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೋಟದ ಕೆಲಸಕ್ಕೆ ಹೋಗುತ್ತಿದ್ದಾಗ ಅತ್ಯಾಚಾರ ನಡೆಸಿದ್ದಾರೆ ಎಂದು ಬಾಲಕಿ ಆರೋಪಿಸಿರುವ ನಾರಾಯಣ ರೈ ಅವರನ್ನು ಎರಡು ದಿನ ಪೊಲೀಸರ ವಶಕ್ಕೆ ಒಪ್ಪಿಸಿಪುತ್ತೂರು ಸೆಷನ್ಸ್ ನ್ಯಾಯಾಲಯ ಆದೇಶಿಸಿತ್ತು. ಆದೇಶದ ಬೆನ್ನಲ್ಲೇ ಅನಾರೋಗ್ಯದ ಹಿನ್ನೆಲೆ ನ್ಯಾಯಾಲಯದ ಅನುಮತಿಯೊಂದಿಗೆ ನಾರಾಯಣ ರೈ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕುದ್ಕಾಡಿ ನಾರಾಯಣ ರೈ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಪುತ್ತೂರು ನ್ಯಾಯಾಲಯದಲ್ಲಿ ವಜಾಗೊಂಡಿತ್ತು. ಹೈಕೋರ್ಟಿನಲ್ಲಿ ಅವರು ಖ್ಯಾತ ವಕೀಲರೋರ್ವರ ಮೂಲಕ ನಿರೀಕ್ಷಣಾ ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದರು.