ಕರ್ನಾಟಕ

karnataka

ETV Bharat / state

ಬಲಿವಾಡು ಅಕ್ಕಿ ಸಮರ್ಪಿಸುವ ಮುಖೇನ ಕುಕ್ಕೆ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ಶುರು

ಆರಂಭದಲ್ಲಿ ಪ್ರಧಾನ ಅರ್ಚಕರು ರಾಮ ಲಕ್ಷ್ಮಣ ಎಂಬ ಹೆಸರಿನ ಜೋಡಿ ಅನ್ನದ ಕೊಪ್ಪರಿಗೆಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿದರು. ನಂತರ ದೇವಳದ ಒಳಾಂಗಣದಲ್ಲಿ ಇರುವ ದೊಡ್ಡದಾದ ಎರಡು ಒಲೆಗಳ ಮೇಲೆ ಅನ್ನದಾನದ ಸಂಕೇತವಾದ ಕೊಪ್ಪರಿಗೆಗಳನ್ನು ಏರಿಸಲಾಯಿತು. ಕೊಪ್ಪರಿಗೆಗಳಲ್ಲಿ ಅನ್ನ ಬೆಂದ ಬಳಿಕ ಅದಕ್ಕೆ ಪೂಜೆ ಸಲ್ಲಿಸಲಾಯಿತು.

kukke festivel
ಕುಕ್ಕೆ ಕ್ಷೇತ್ರದಲ್ಲಿ ಜಾತ್ರಾ

By

Published : Dec 13, 2020, 5:43 AM IST

ಸುಬ್ರಹ್ಮಣ್ಯ: ವಿಶ್ವ ಪ್ರಸಿದ್ಧ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾರ್ತಿಕ ಬಹುಳ ದ್ವಾದಶಿಯಾದ ಶನಿವಾರ ಕೊಪ್ಪರಿಗೆ ಏರುವುದರ ಮೂಲಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಆರಂಭವಾಯಿತು.

ಮುಂಜಾನೆ 8.10ರ ಧನುರ್ ಲಗ್ನ ಶುಭ ಮುಹೂರ್ತದಲ್ಲಿ ಕೊಪ್ಪರಿಗೆಗಳನ್ನು ಏರಿಸಲಾಯಿತು. ಪೂರ್ವಶಿಷ್ಠ ಸಂಪ್ರದಾಯದಂತೆ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ವಿವಿಧ ವೈಧಿಕ ವಿಧಾನಗಳನ್ನು ನೆರವೇರಿಸಿದರು.

ಕೋವಿಡ್ ಮಾರ್ಗಸೂಚಿ ಪ್ರತಿ

ಆರಂಭದಲ್ಲಿ ಪ್ರಧಾನ ಅರ್ಚಕರು ರಾಮ ಲಕ್ಷ್ಮಣ ಎಂಬ ಹೆಸರಿನ ಜೋಡಿ ಅನ್ನದ ಕೊಪ್ಪರಿಗೆಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿದರು. ನಂತರ ದೇವಳದ ಒಳಾಂಗಣದಲ್ಲಿ ಇರುವ ದೊಡ್ಡದಾದ ಎರಡು ಒಲೆಗಳ ಮೇಲೆ ಅನ್ನದಾನದ ಸಂಕೇತವಾದ ಕೊಪ್ಪರಿಗೆಗಳನ್ನು ಏರಿಸಲಾಯಿತು. ಕೊಪ್ಪರಿಗೆಗಳಲ್ಲಿ ಅನ್ನ ಬೆಂದ ಬಳಿಕ ಅದಕ್ಕೆ ಪೂಜೆ ಸಲ್ಲಿಸಲಾಯಿತು.

ಮಂಗಳೂರು ವಿವಿಯಿಂದ ಹೊರಹೊಮ್ಮಿದ ಚೊಚ್ಚಲ ತುಳು ಸ್ನಾತಕೋತ್ತರ ಪದವೀಧರರು

ಶ್ರೀ ಕ್ಷೇತ್ರದಲ್ಲಿ ಶನಿವಾರ ಸಹಸ್ರಾರು ಭಕ್ತರು ಭಕ್ತಿಯಿಂದ ಕೊಪ್ಪರಿಗೆ ಪ್ರಸಾದ ಸೇವಿಸಿದರು. ಜಾತ್ರಾ ಸಮಯದಲ್ಲಿ ಕೊಪ್ಪರಿಗೆ ಅನ್ನದ ಊಟವನ್ನು ಭಕ್ತಾಧಿಗಳು ಭಕ್ತಿ ಶ್ರದ್ಧೆಯಿಂದ ಸ್ವೀಕರಿಸುವುದು ವಾಡಿಕೆ. ಇದು ಕ್ಷೇತ್ರದ ಅತ್ಯುನ್ನತ ಪ್ರಸಾದಗಳಲ್ಲಿ ಒಂದಾಗಿದೆ. ಕೊಪ್ಪರಿಗೆ ಏರಿದ ನಂತರ ಇಳಿಯುವ ತನಕ ಭಕ್ತರು ಕೊಪ್ಪರಿಗೆಗೆ ಅಕ್ಕಿ ಸಮರ್ಪಣೆ ಮಾಡುತ್ತಾರೆ.

ಈ ಸಂದರ್ಭದಲ್ಲಿ ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಕ್ಷೇತ್ರ ಪುರೋಹಿತ ಮದುಸೂಧನ ಕಲ್ಲೂರಾಯ, ದೇವಳದ ಅಭಿವೃದ್ಧಿ ಸಮಿತಿ ಸದಸ್ಯರಾದ ಮೋಹನರಾಂ ಸುಳ್ಳಿ, ವನಜಾ.ವಿ.ಭಟ್, ಕಛೇರಿ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಶ್ರೀ ದೇವಳದ ಪದ್ಮನಾಭ ಶೆಟ್ಟಿಗಾರ್ ಸೇರಿದಂತೆ, ಪುರೋಹಿತರು ಮತ್ತು ಭಕ್ತರು ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಇಲ್ಲಚಂಪಾಷಷ್ಠಿ ಜಾತ್ರೋತ್ಸವದ ಪ್ರಯುಕ್ತ ಇಂದಿನಿಂದ (ಡಿ.12) ಡಿ.26ರ ತನಕ ಕೊಪ್ಪರಿಗೆ ಇಳಿಯುವವರೆಗೆ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ಜರುಗುವುದಿಲ್ಲ. ಈ ಬಳಿಕ ಸರ್ಪಸಂಸ್ಕಾರ ಸೇವೆ ಆರಂಭವಾಗಲಿದೆ ಎಂದು ದೇವಸ್ಥಾನದ ಮೂಲಗಳು ತಿಳಿಸಿದೆ. ಕೊವಿಡ್ ಹಿನ್ನಲೆಯಲ್ಲಿ ದೇಗುಲದಿಂದ ನಿಬಂಧನೆಗಳನ್ನು ಹೊರಡಿಸಲಾಗಿದೆ.

ABOUT THE AUTHOR

...view details