ಕರ್ನಾಟಕ

karnataka

ETV Bharat / state

ಕುಕ್ಕೆ ಸುಬ್ರಹ್ಮಣ್ಯನಿಗೆ ಅವಭೃತೋತ್ಸವ... ಚಂಪಾಷಷ್ಠಿ ಪ್ರಯುಕ್ತ ಮತ್ಸ್ಯತೀರ್ಥದಲ್ಲಿ ನೌಕಾ ವಿಹಾರ

ಶ್ರೀ ದೇವರ ಅವಭೃತೋತ್ಸವ ಸವಾರಿ ಶ್ರೀ ದೇವಳದಿಂದ ಹೊರಟು ಬಿಲದ್ವಾರದ ಕಟ್ಟೆಯಲ್ಲಿ ಕಟ್ಟೆ ಪೂಜೆ ನೆರವೇರಿತು. ಕುಮಾರಧಾರಾ ನದಿಯ ಮತ್ಸ್ಯತೀರ್ಥದಲ್ಲಿ ಶ್ರೀ ದೇವರ ನೌಕಾ ವಿಹಾರ ನಡೆಯಿತು.

Kukke subramanya
ಅವಭೃತೋತ್ಸವ

By

Published : Dec 21, 2020, 10:18 PM IST

ಸುಬ್ರಹ್ಮಣ್ಯ(ದ.ಕ): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಪುಣ್ಯ ತೀರ್ಥ ಕುಮಾರಧಾರಾದ ಝಳಕದ ಗುಂಡಿಯಲ್ಲಿ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ದೇವಳದ ಪ್ರಧಾನ ಅರ್ಚಕರು ದೇವರ ಅವಭೃತೋತ್ಸವ ನೆರವೇರಿಸಿದರು.

ಕುಕ್ಕೆ ಸುಬ್ರಹ್ಮಣ್ಯನಿಗೆ ಅವಭೃತೋತ್ಸವ

ನಂತರದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾರ್ಗಶಿರ ಶುದ್ಧ ಸಪ್ತಮಿಯ ದಿನವಾದ ಸೋಮವಾರ ಬೆಳಗ್ಗೆ ಪುಣ್ಯ ನದಿ ಕುಮಾರಧಾರಾದಲ್ಲಿ ಶ್ರೀ ದೇವರ ನೌಕಾ ವಿಹಾರ ನಡೆಯಿತು. ಸಹಸ್ರಾರು ಭಕ್ತರು ಶ್ರೀ ದೇವರ ಉತ್ಸವ ವೀಕ್ಷಿಸಿದರು. ಬೆಳಗ್ಗೆ ದೇವಳದ ದ್ವಾದಶಿ ಮಂಟಪದಲ್ಲಿ ಓಕುಳಿ ಪೂಜೆ ಮತ್ತು ಓಕುಳಿ ಚೆಲ್ಲಾಟ ನೆರವೇರಿತು. ಬಳಿಕ ದೇವರಿಗೆ ಓಕುಳಿ ಸಮರ್ಪಣೆಯಾಗಿ ಭಕ್ತಾದಿಗಳಿಗೆ ಓಕುಳಿ ಪ್ರೋಕ್ಷಣೆ ನಡೆಯಿತು.

ಬಳಿಕ ಶ್ರೀ ದೇವರ ಅವಭೃತೋತ್ಸವ ಸವಾರಿ ಶ್ರೀ ದೇವಳದಿಂದ ಹೊರಟು ಬಿಲದ್ವಾರದ ಕಟ್ಟೆಯಲ್ಲಿ ಕಟ್ಟೆಪೂಜೆ ನೆರವೇರಿತು. ಕುಮಾರಧಾರಾ ನದಿಯ ಮತ್ಸ್ಯ ತೀರ್ಥದಲ್ಲಿ ಶ್ರೀ ದೇವರ ನೌಕಾ ವಿಹಾರ ನಡೆಯಿತು. ಮಾವು, ಬಾಳೆ, ತಳಿರು-ತೋರಣ ಮತ್ತು ಹೂವುಗಳನ್ನೊಳಗೊಂಡು ಬಿರುದಾವಳಿಗಳಿಂದ ಸಿಂಗರಿಸಲ್ಪಟ್ಟ ಅವಳಿ ದೋಣಿಗಳನ್ನು ಒಂದಾಗಿಸಿ ಅಚ್ಚುಕಟ್ಟಾಗಿ ನಿರ್ಮಿತವಾದ ತೆಪ್ಪದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರ ನೌಕಾ ವಿಹಾರ ನೆರವೇರಿತು.

ಇದನ್ನೂ ಓದಿ:ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಡಿ.ಎಸ್.ಶ್ರೀಧರ್ ಆಯ್ಕೆ

ನಂತರ ಕುಮಾರಧಾರಾ ನದಿಯ ಮತ್ಸ್ಯ ತೀರ್ಥದ ಶ್ರೀ ದೇವರ ಝಳಕದ ಗುಂಡಿಯಲ್ಲಿ ದೇವರ ಅವಭೃತೋತ್ಸವ ನಡೆಯಿತು. ಶ್ರೀ ದೇವರ ಝಳಕದ ಧಾರ್ಮಿಕ ವಿಧಿ ವಿಧಾನವನ್ನು ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯ ನೆರವೇರಿಸಿದರು. ದೇವಳದ ಅರ್ಚಕರ ಮಂತ್ರ ಘೋಷದ ನಡುವೆ ಪ್ರಧಾನ ಅರ್ಚಕರು ಕುಮಾರಧಾರಾ ಪುಣ್ಯ ತೀರ್ಥವನ್ನು ಶಂಖದಲ್ಲಿ ದೇವರಿಗೆ ಸಮರ್ಪಿಸಿದರು. ಬಳಿಕ ಸೀಯಾಳಾಭಿಷೇಕ ಸೇರಿದಂತೆ ವಿವಿಧ ವೈದಿಕ ವಿಧಿ ವಿಧಾನಗಳನ್ನು ನಡೆಸಿದರು. ನಂತರ ಕುಮಾರಧಾರಾ ಪುಣ್ಯತೀರ್ಥದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರ ಝಳಕ ನೆರವೇರಿತು. ಝಳಕದ ಬಳಿಕ ಕುಮಾರಧಾರಾ ನದಿ ತೀರದ ಅವಭೃತಕಟ್ಟೆಯಲ್ಲಿ ದೇವರಿಗೆ ವಿಶೇಷ ಕಟ್ಟೆಪೂಜೆ ನಡೆಯಿತು

ABOUT THE AUTHOR

...view details