ಕರ್ನಾಟಕ

karnataka

ETV Bharat / state

ಕುಕ್ಕೆ ಸುಬ್ರಹ್ಮಣ್ಯ: ಭಕ್ತರಿಗೆ ಸುರಕ್ಷಿತವಾಗಿ ತಂಗಲು ವ್ಯವಸ್ಥೆ ಕಲ್ಪಿಸಿದ ದೇವಾಲಯ - ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನಕ್ಕೆ ಬಂದ ಭಕ್ತರಿಗೆ ರಾತ್ರಿ ಉಳಿದುಕೊಳ್ಳಲು ವಸತಿ ಸಮಸ್ಯೆ ನಿರ್ಮಾಣವಾಗಿ ರಸ್ತೆಯಲ್ಲೇ ಮಲಗುವಂತಾಗಿತ್ತು. ಇದೀಗ ದೇವಾಲಯದಿಂದ ವ್ಯವಸ್ಥೆ ಮಾಡಲಾಗಿದೆ.

Kukke Shri Subramanya Temple
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ

By

Published : Apr 17, 2022, 10:57 PM IST

ಸುಬ್ರಹ್ಮಣ್ಯ(ದಕ್ಷಿಣ ಕನ್ನಡ):ವಿಶ್ವಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶು ಹಬ್ಬ ಸೇರಿದಂತೆ ವಿಶೇಷ ದಿನಗಳ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ನಿನ್ನೆ ರಾತ್ರಿ ಭಕ್ತರಿಗೆ ವಸತಿಗೆ ವ್ಯವಸ್ಥೆ ಸಿಗದ ಕಾರಣ ರಸ್ತೆ ಹಾಗೂ ದೇವಸ್ಥಾನದ ಹಾಲ್‌ಗಳಲ್ಲಿ ಮಲಗುವ ಸ್ಥಿತಿ ಎದುರಾಗಿತ್ತು. ಆದರೆ, ಇದೀಗ ದೇವಳದಿಂದ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಆದಿ ಸುಬ್ರಹ್ಮಣ್ಯ ಕಲ್ಯಾಣ ಮಂಟಪದಲ್ಲಿ ಭಕ್ತರಿಗೆ ರಾತ್ರಿ ತಂಗಲು ವ್ಯವಸ್ಥೆ ಮಾಡಲಾಗಿದೆ.

ABOUT THE AUTHOR

...view details