ಸುಬ್ರಹ್ಮಣ್ಯ: ಇತಿಹಾಸ ಪ್ರಸಿದ್ದ ಕರ್ನಾಟಕದ ಪುಣ್ಯ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಡಿ. 1 ಮತ್ತು 2ರಂದು ನಡೆಯುವ ವಾರ್ಷಿಕ ಜಾತ್ರೆ ಚಂಪಾಷಷ್ಠಿ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ.
ಷಷ್ಠಿ ಮಹೋತ್ಸವಕ್ಕೆ ಸಿದ್ಧಗೊಂಡ ಕುಕ್ಕೆ ಸುಬ್ರಹ್ಮಣ್ಯ - ವಾರ್ಷಿಕ ಜಾತ್ರೆ ಚಂಪಾಷಷ್ಠಿ
ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಡಿ. 1 ಮತ್ತು 2ರಂದು ನಡೆಯುವ ವಾರ್ಷಿಕ ಜಾತ್ರೆ ಚಂಪಾಷಷ್ಠಿ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ.
ಚೌತಿ, ಪಂಚಮಿ ಹಾಗೂ ಷಷ್ಠಿ ದಿನಗಳಲ್ಲಿ ಕ್ಷೇತ್ರದಲ್ಲಿ ವಿಶೇಷ ಸೇವೆಯಾದ ಬೀದಿಮಡೆ ಸ್ನಾನ, ಎಡೆಮಡೆಸ್ನಾನದ ಜೊತೆಗೆ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಉಮಾಮಹೇಶ್ವರ ದೇವರಿಗೆ ರಥೋತ್ಸವಗಳು ನಡೆಯುತ್ತದೆ. ಇಲ್ಲಿ ನಡೆಯುವ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವಕ್ಕೆ ವಿಶಿಷ್ಟ ಮಹತ್ವವೂ ಇದೆ. ಮಾತ್ರವಲ್ಲದೇ ನೂತನ ರಥದಲ್ಲಿ ದೇವರ ರಥೋತ್ಸವ ಎಂಬ ವಿಶೇಷತೆ ಈ ವರ್ಷದ ರಥೋತ್ಸವಕ್ಕೆ ಇದೆ.
ಕಾರ್ಯಕ್ರಮಗಳ ವಿವರ:
ಬೀದಿ ಮಡೆಸ್ನಾನ ಆರಂಭವಾಗಿದ್ದು, ನಾಳೆ ಎಡೆಮಡೆಸ್ನಾನ, ರಾತ್ರಿ ಹೂವಿನ ತೇರಿನ ಉತ್ಸವ ನಡೆಯಲಿದ್ದು , ಡಿ 1 ರಂದು ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ ನಡೆಯಲಿದೆ. ಡಿ 2 ರಂದು ಬೆಳಗ್ಗೆ ಚಂಪಾಷಷ್ಠಿ ಮಹಾ ರಥೋತ್ಸವ ನಡೆಯಲಿದೆ. ಜಾತ್ರೋತ್ಸವದ ಅಂತಿಮ ದಿನವಾದ ಡಿ 3 ರಂದು ಶ್ರೀ ದೇವರ ಅವಭೃತೋತ್ಸವ , ನೌಕಾವಿಹಾರಗಳು ಜರುಗಲಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಈ ಜಾತ್ರಾ ಕಾರ್ಯಕ್ರಮಗಳನ್ನು ವೀಕ್ಷಿಸಲು ದೇಶ ಹಾಗೂ ವಿದೇಶಗಳಿಂದಲೂ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾಧಿಗಳು ಇಲ್ಲಿಗೆ ಭೇಟಿ ನೀಡುವುದು ವಿಶೇಷ.