ಕರ್ನಾಟಕ

karnataka

ETV Bharat / state

ಮಾಜಿ ಸಿಎಂ‌ ಹೆಚ್‌ಡಿಕೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ.. ಯುವ ಜೆಡಿಎಸ್ ದೂರು - ಯುವ ಜೆಡಿಎಸ್ ದೂರು

ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಅದೊಂದು ಪಟಾಕಿಗೆ ಬಳಸುವ ಮಿಣಿಮಿಣಿ ಪೌಡರ್ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು. ಇದನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಲಾಗುತ್ತಿದೆ ಎಂದು ದೂರು ನೀಡಲಾಗಿದೆ.

Complaint registration
ದೂರು

By

Published : Jan 25, 2020, 7:05 PM IST

ಮಂಗಳೂರು:ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ಯುವ ಜನತಾದಳ ಕಾರ್ಯಕರ್ತರು ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರಿಗೆ ಕಂಪ್ಲೇಂಟ್ ನೀಡಲಾಗಿದೆ.

ದೂರು ನೀಡಿದ ಯುವ ಜೆಡಿಎಸ್​ ಕಾರ್ಯಕರ್ತರು..

ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಅದೊಂದು ಪಟಾಕಿಗೆ ಬಳಸುವ ಮಿಣಿಮಿಣಿ ಪೌಡರ್ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು. ಇದನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಲಾಗುತ್ತಿದೆ ಎಂದು ದೂರು ನೀಡಲಾಗಿದೆ.

ಮಾಜಿ ಸಿಎಂ ಹೆಚ್‌ಡಿಕೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಅವಹೇಳನಕಾರಿ ಸಂದೇಶಗಳನ್ನು ಹರಡುತ್ತಿದ್ದಾರೆ. ಇವರುಗಳ ವಿರುದ್ಧ ಕಠಿಣ ಕ್ರಮವನ್ನು ಆದಷ್ಟು ಬೇಗ ಜರುಗಿಸಿ ಶಿಕ್ಷೆಗೆ ಒಳಪಡಿಸಬೇಕು ಮತ್ತು ಇಂತಹ ಕೃತ್ಯ ನಡೆಸುವ ಸಮಾಘಾತುಕ ಶಕ್ತಿಗಳನ್ನು ಮಟ್ಟ ಹಾಕಬೇಕು ಎಂದು ದ.ಕ ಜಿಲ್ಲಾ ಯುವ ಜನತಾದಳ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಕ್ರೈಂ ಡಿಸಿಪಿ ಲಕ್ಷ್ಮಿ ಗಣೇಶ್ ಅವರ ಮೂಲಕ ಪೊಲೀಸ್ ಆಯುಕ್ತರಿಗೆ ಮತ್ತು ಸೈಬರ್ ಕ್ರೈಂ ಪೊಲೀಸರಿಗೆ ದೂರು ಸಲ್ಲಿಸಲಾಯಿತು.

ABOUT THE AUTHOR

...view details