ಮಂಗಳೂರು: ಮಂಗಳೂರಿನ ಖ್ಯಾತ ವಕೀಲ ಕೆ.ಎಸ್.ಎನ್.ರಾಜೇಶ್ ಎಂಬುವರ ಮೇಲೆ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿ ಬಂದಿತ್ತು. ತನ್ನ ಕಚೇರಿಯಲ್ಲಿ ಇಂಟರ್ನ್‌ಶಿಪ್ ಮಾಡಲು ಬಂದಿದ್ದ ಮಂಗಳೂರಿನ ಕಾನೂನು ಪದವಿ ಕಾಲೇಜಿನ ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಈ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಪಿಎಸ್ಐ ಮತ್ತು ಹೆಡ್ ಕಾನ್ಸ್ಟೇಬಲ್ ಅವರನ್ನು ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಆದೇಶಿಸಿದ್ದಾರೆ.
ಪೂರ್ವ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಕಲಾ ಮತ್ತು ಹೆಡ್ ಕಾನ್ಸ್ಟೇಬಲ್ ಪ್ರಮೋದ್ ಅಮಾನತು ಆದವರು. ಸಂತ್ರಸ್ತೆ ವಿದ್ಯಾರ್ಥಿನಿಯಿಂದ ಇವರು ಕಾನೂನು ಮುಚ್ಚಳಿಕೆ ಬರೆಸಿಕೊಂಡು ಹೆಬ್ಬೆಟ್ಟು ಸಹಿಯನ್ನು ತೆಗೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇವರನ್ನು ಅಮಾನತು ಮಾಡಲಾಗಿದೆ.