ಕರ್ನಾಟಕ

karnataka

ETV Bharat / state

ರೈತ ಸಂಪರ್ಕ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಮಠಂದೂರು

ಕೃಷಿ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ತಲಾ 50 ಲಕ್ಷ ರೂ.ಯಂತೆ ಮಂಜೂರಾಗಿರುವ ನಾಲ್ಕು ರೈತ ಸಂಪರ್ಕ ಕೇಂದ್ರದ ಪೈಕಿ, ಪುತ್ತೂರಿನ ದರ್ಬೆ ಕೃಷಿ ಇಲಾಖೆಯ ಸಮೀಪದ ನಿವೇಶನದಲ್ಲಿ ರೈತ ಸಂಪರ್ಕ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು.

ರೈತ ಸಂಪರ್ಕ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ
ರೈತ ಸಂಪರ್ಕ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ

By

Published : Aug 21, 2020, 5:37 PM IST

ಪುತ್ತೂರು (ದಕ್ಷಿಣ ಕನ್ನಡ): ಕೃಷಿಕರು ಕೃಷಿಗೆ ಸಂಬಂಧಪಟ್ಟ ಮಾಹಿತಿಗಳನ್ನು ಪಡೆಯಬೇಕೆಂಬ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದಕ್ಕೆ ತಕ್ಕಂತೆ ಆಧುನಿಕತೆಯಲ್ಲಿ ಕೃಷಿಕರು ತಂತ್ರಜ್ಞಾನ ಪಡೆಯುವಲ್ಲಿ ಯಶಸ್ವಿಯಾಗಬೇಕು. ಕೃಷಿಗೆ ಸಂಬಂಧಿಸಿದ ಮಾಹಿತಿ, ಪರಿಕರಗಳನ್ನು ಸೂಕ್ತವಾಗಿ ಒದಗಿಸುವ ನಿಟ್ಟಿನಲ್ಲಿ ರೈತ ಸಂಪರ್ಕ ಕೇಂದ್ರದೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಳ್ಳಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಕೃಷಿ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ತಲಾ ರೂ. 50 ಲಕ್ಷ ದಂತೆ ಮಂಜೂರುಗೊಂಡಿರುವ ನಾಲ್ಕು ರೈತ ಸಂಪರ್ಕ ಕೇಂದ್ರದ ಪೈಕಿ ಪುತ್ತೂರಿನ ದರ್ಬೆ ಕೃಷಿ ಇಲಾಖೆಯ ಸಮೀಪದ ನಿವೇಶನದಲ್ಲಿ ರೈತ ಸಂಪರ್ಕ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು. ಆ ಬಳಿಕ ಕೃಷಿ ಇಲಾಖೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೃಷಿ ಕ್ರಾಂತಿ ಆದ ಬಳಿಕ ಆಹಾರದ ಸಮಸ್ಯೆ ಪರಿಹಾರವಾಯಿತು. ಆದರೆ, ರೈತರ ಸಮಸ್ಯೆಗೆ ಪರಿಹಾರ ಆಗಿರಲಿಲ್ಲ. ರೈತರಿಗೆ ಬೆಳೆ ಹಾನಿ, ಕೃಷಿಗೆ ಮೌಲ್ಯ ಸಿಗದೇ ಇದ್ದಾಗ ರೈತನನ್ನು ಕಾಪಾಡುವ ಯೋಜನೆಯನ್ನು ಸರಕಾರ ತಂದಿದೆ. ರೈತ ಮತ್ತು ಆತನ ಕುಟುಂಬ ನಿರಂತರ ಕೃಷಿ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇಂತಹ ಯೋಜನೆಗಳಲ್ಲಿ ಕೇವಲ ಸಾಲ ಮತ್ತು ಬಡ್ಡಿ ಮನ್ನಾ ಮಾಡದೇ ಕೃಷಿ ಇಲಾಖೆಯನ್ನು ಡಿಜಿಟಲೀಕರಣ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ರೈತರಿಗೆ ಕೃಷಿಗೆ ಸಂಬಂಧಿಸಿ ಸರಿಯಾದ ಮಾಹಿತಿ ಇರಬೇಕೆಂಬ ನೆಲೆಯಲ್ಲಿ ಇವತ್ತು ರೈತನ ಮನೆ ಬಾಗಿಲಿಗೆ ಆಯಾ ಹೋಬಳಿಯಲ್ಲಿ ರೈತ ಸಂಪರ್ಕ ಕೇಂದ್ರ ವ್ಯವಸ್ಥೆಯನ್ನು ಮಾಡಿದೆ.

ಜಿಲ್ಲೆಗೆ 4 ರೈತರ ಸಂಪರ್ಕ ಕೇಂದ್ರ ಬಂದಾಗ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮೂರು ರೈತ ಸಂಪರ್ಕ ಕೇಂದ್ರದ ಕಟ್ಟಡಕ್ಕೆ ಅನುದಾನ ಸಿಕ್ಕಿರುವುದು ಹೆಮ್ಮೆಯಾಗಿದೆ ಎಂದರು.

ತಾ.ಪಂ.ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಕೆಆರ್​ಡಿಸಿಎಲ್ ಇಂಜಿನಿಯರ್ ರಮೇಶ್, ಪುತ್ತೂರು ಉಪವಿಭಾಗದ ಉಪಕೃಷಿ ನಿರ್ದೇಶಕ ಶಿವಶಂಕರ್ ದಾನೆಗೊಂಡರ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನಂದನ ಶೆಣೈ, ಕೃಷಿ ಅಧಿಕಾರಿ ಎಸ್. ಮಂಜುನಾಥ್, ಪ್ರವೀಣ್ ಕುಮಾರ್, ಕೃಷಿ ಅಧೀಕ್ಷಕ ಕೃಷ್ಣ ಪ್ರಸಾದ್ ಭಂಡಾರಿ, ಸಹಾಯಕ ಕೃಷಿ ಅಧಿಕಾರಿ ಶುಭಕರ್ ಉಪಸ್ಥಿತರಿದ್ದರು.

ABOUT THE AUTHOR

...view details