ಕರ್ನಾಟಕ

karnataka

ETV Bharat / state

ವಿಧಾನ ಪರಿಷತ್ ಚುನಾವಣೆ : ಮೊದಲ ದಿನ ಮಂಗಳೂರಿನಲ್ಲಿ ಒಂದು ನಾಮಪತ್ರ ಸಲ್ಲಿಕೆ - ವಿಧಾನ ಪರಿಷತ್ ಚುನಾವಣೆ

ಸುಪ್ರೀತ್ ಕುಮಾರ್ ಪೂಜಾರಿ ಅವರು ಈ ಹಿಂದೆಯೂ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ವಿವಿಧ ಪಕ್ಷ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಿದ್ದರು..

ಸ್ವತಂತ್ರ ಅಭ್ಯರ್ಥಿ ಸುಪ್ರಿತ್ ಕುಮಾರ್ ಪೂಜಾರಿ
ಸ್ವತಂತ್ರ ಅಭ್ಯರ್ಥಿ ಸುಪ್ರಿತ್ ಕುಮಾರ್ ಪೂಜಾರಿ

By

Published : Nov 16, 2021, 9:06 PM IST

Updated : Nov 16, 2021, 10:04 PM IST

ಬೆಂಗಳೂರು/ಮಂಗಳೂರು:ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು ಚುನಾವಣೆ ನಡೆಯಲಿದೆ. ಇಂದು ಅಧಿಸೂಚನೆ ಪ್ರಕಟವಾಗುವುದರೊಂದಿಗೆ ನಾಮಪತ್ರ ಸಲ್ಲಿಕೆ ಕಾರ್ಯವು ಇಂದಿನಿಂದಲೇ ಆರಂಭವಾಗಿದೆ. ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ಇದೇ ತಿಂಗಳ 23 ರವರೆಗೂ ನಾಮಪತ್ರ ಸಲ್ಲಿಸಲು ಅವಕಾಶವಿದೆ. ನ. 24 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.26 ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದೆ.

ಡಿಸೆಂಬರ್ 10 ರಂದು ಬೆಳಗ್ಗೆ 8 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14 ರಂದು ಮತ ಎಣಿಕೆ ನಡೆದು ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಡಿಸೆಂಬರ್ 16 ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಚುನಾವಣೆ ನಡೆಯುವ ಜಿಲ್ಲೆಗಳಲ್ಲಿ ಯಾವುದಾದರೂ ಸರ್ಕಾರಿ ಕಾರ್ಯಕ್ರಮ ನಡೆಸಬೇಕಾದರೆ ಜಿಲ್ಲಾ ಚುನಾವಣಾಧಿಕಾರಿಗಳಿಂದ ಮುಂಚಿತವಾಗಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಕರ್ನಾಟಕ ವಿಧಾನ ಪರಿಷತ್‍ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಇಂದು ಮೊದಲ ನಾಮಪತ್ರ ಸಲ್ಲಿಕೆಯಾಗಿದೆ.

ನಾಮಪತ್ರ ಸಲ್ಲಿಕೆಗೆ ಇಂದು ಮೊದಲ ದಿನವಾಗಿದೆ. ಮೊದಲ ದಿನವೇ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ಸ್ವತಂತ್ರ ಅಭ್ಯರ್ಥಿಯಾಗಿ ಸುಪ್ರಿತ್ ಕುಮಾರ್ ಪೂಜಾರಿ ಅವರು ಇಂದು ನಾಮಪತ್ರ ಸಲ್ಲಿಸಿದರು ಎಂದು ಸಹಾಯಕ ಚುನಾವಣಾಧಿಕಾರಿ ಆಗಿರುವ ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸುಪ್ರೀತ್ ಕುಮಾರ್ ಪೂಜಾರಿ ಅವರು ಈ ಹಿಂದೆಯೂ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ವಿವಿಧ ಪಕ್ಷ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಿದ್ದರು.

Last Updated : Nov 16, 2021, 10:04 PM IST

ABOUT THE AUTHOR

...view details