ಕರ್ನಾಟಕ

karnataka

ETV Bharat / state

ಬಿಪಿಎಲ್ ಕಾರ್ಡ್​ಗಳ ಅರ್ಜಿ ಸ್ವೀಕಾರ ತಕ್ಷಣ ಆರಂಭವಾಗಲಿ: ಯ.ಟಿ.ಖಾದರ್ ಒತ್ತಾಯ - UT kadhar pressmeet

ಬಂಟ್ವಾಳ ತಾಲ್ಲೂಕಿನ ಭಾಗದಲ್ಲಿ 94ಸಿಗೆ ಮೂರುವರೆ ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದರು. ಇವರಲ್ಲಿ ಸುಮಾರು ಎರಡೂವರೆ ಸಾವಿರ ಹಕ್ಕುಪತ್ರ ಕೊಡುವ ಮೂಲಕ ಬೇಡಿಕೆ ಈಡೇರಿಸಿದ್ದೇವೆ. ಒಂದು ಸಾವಿರದಷ್ಟು ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಈ ಕುರಿತು ಎಸಿಯವರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಯ.ಟಿ.ಖಾದರ್
ಯ.ಟಿ.ಖಾದರ್

By

Published : Oct 12, 2020, 9:56 PM IST

ಬಂಟ್ವಾಳ:ಬಿಪಿಎಲ್ ಕಾರ್ಡ್​ಗಳ ಅರ್ಜಿ ಸ್ವೀಕಾರ ಗ್ರಾಮೀಣ ಮಟ್ಟದಲ್ಲಿ ಇನ್ನೂ ಆರಂಭಿಸಿಲ್ಲ. ಆನ್ಲೈನ್​​ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಬೇಕು. ಜನರು ತಾಳ್ಮೆ ಕಳೆದುಕೊಳ್ಳುವ ಮುನ್ನ ಸರ್ಕಾರ ಬಡವರ ಆಹಾರದ ಹಕ್ಕನ್ನು ಕಸಿಯದೆ ನ್ಯಾಯ ಒದಗಿಸಬೇಕು ಎಂದು ಮಂಗಳೂರು ಶಾಸಕ ಯು.ಟಿ.ಖಾದರ್ ಹೇಳಿದರು.

ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಬಂಟ್ವಾಳ ತಾಲೂಕಿನ ಗ್ರಾಮಗಳ 94ಸಿ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೋಮವಾರ ಸಂಜೆ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ ಉಪಸ್ಥಿತಿಯಲ್ಲಿ ಸೌಲಭ್ಯ ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಟ್ವಾಳ ತಾಲ್ಲೂಕಿನ ಭಾಗದಲ್ಲಿ 94ಸಿಗೆ ಮೂರುವರೆ ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದರು. ಇವರಲ್ಲಿ ಸುಮಾರು ಎರಡೂವರೆ ಸಾವಿರ ಹಕ್ಕುಪತ್ರ ಕೊಡುವ ಮೂಲಕ ಬೇಡಿಕೆ ಈಡೇರಿಸಿದ್ದೇವೆ. ಒಂದು ಸಾವಿರದಷ್ಟು ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಈ ಕುರಿತು ಎಸಿಯವರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಯ.ಟಿ.ಖಾದರ್

ಯಾರಿಗೆಲ್ಲ ಹಕ್ಕುಪತ್ರ ಕೊಟ್ಟಿದ್ದಾರೆ ಗ್ರಾಪಂ ತಕ್ಷಣ ಖಾತಾ ಮಾಡಿ ಕೊಡಬೇಕು, ಗ್ರಾಮೀಣ ಪ್ರದೇಶದ ಜನರನ್ನು ಕಚೇರಿಗಳಲ್ಲಿ ಸತಾಯಿಸಬಾರದು, ವಿಳಂಬ ಧೋರಣೆ ಅನುಸರಿಸಿದರೆ ಗಮನಕ್ಕೆ ತನ್ನಿ ಎಂದು ಸೂಚಿಸಿದರು.

ತುಂಬೆಯಿಂದ ಸಜೀಪಕ್ಕೆ ಸಂಪರ್ಕ ಸೇತುವೆ ನಿರ್ಮಾಣ ಸರ್ಕಾರದ ಮಂಜೂರಾತಿ ಹಂತದಲ್ಲಿದೆ ಎಂದ ಖಾದರ್​. ಈಗಾಗಲೇ ತನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆಗಳ ಅಭಿವೃದ್ಧಿ ಆಗುತ್ತಿದೆ. ಫಜೀರು ಕಂಬಳಪದವು ಸಂಪರ್ಕ ರಸ್ತೆ ಸಹಿತ ಎಲ್ಲಾ ರಸ್ತೆಗಳ ಕಾಮಗಾರಿ ಆರಂಭಗೊಂಡಿದೆ. ಚೇಳೂರಿಂದ ಚಟ್ಟೆಕಲ್ಲು ಮೂಲಕ ಇರಾ ಕುಂಡಾವು ಸಂಪರ್ಕ ರಸ್ತೆ 7.5 ಕೋಟಿ ರೂ. ವೆಚ್ಚದಲ್ಲಿ ಶಂಕುಸ್ಥಾಪನೆ ಆಗಿದೆ. ಗ್ರಾಮೀಣ ಸಂಪರ್ಕ ರಸ್ತೆ ನಿರ್ಮಾಣ ನಡೆಯುತ್ತಿದೆ ಎಂದರು.

ABOUT THE AUTHOR

...view details