ಕರ್ನಾಟಕ

karnataka

ETV Bharat / state

ಮನೆ ಮನಗಳಲ್ಲಿ ಶ್ರೀರಾಮಜ್ಯೋತಿ ಬೆಳಗಿಸೋಣ: ಶ್ರೀ ಗುರುದೇವಾನಂದ ಸ್ವಾಮೀಜಿ... - Sri Gurudevananda Swamiji

ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವೆಂದರೆ ಧರ್ಮದ ಪುನರುತ್ಥಾನಕ್ಕೆ ನಾಂದಿಯೇ ಸರಿ. ತತ್ಸಂಬಂಧ ತಾವೆಲ್ಲರೂ ಮನೆ-ಮನಗಳಲ್ಲಿ ಶ್ರೀ ರಾಮಜ್ಯೋತಿಯನ್ನು ಬೆಳಗಿಸೋಣ. ಸತ್ಸಂಕಲ್ಪವನ್ನು ಮಾಡೋಣ ಎಂದು ಹೇಳಿದ್ದಾರೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ.

Bantwal
ಶ್ರೀ ಗುರುದೇವಾನಂದ ಸ್ವಾಮೀಜಿ

By

Published : Aug 3, 2020, 10:59 PM IST

ಬಂಟ್ವಾಳ: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಮಂದಿರ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿರುವುದು, ರಾಮಭಕ್ತರ ಅರ್ಥಾತ್ ಪ್ರಜ್ಞಾವಂತ ಪ್ರಜೆಗಳ ಕನಸು ನನಸಾಗುವ ಸಮಯ ಒದಗಿ ಬಂದಿರುವುದು ಸಂತಸದ ವಿಚಾರ ಎಂದು ಬಂಟ್ವಾಳ ತಾಲೂಕಿನ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ.

ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವೆಂದರೆ ಧರ್ಮದ ಪುನರುತ್ಥಾನಕ್ಕೆ ನಾಂದಿಯೇ ಸರಿ. ತತ್ಸಂಬಂಧ ತಾವೆಲ್ಲರೂ ಮನೆ-ಮನಗಳಲ್ಲಿ ಶ್ರೀರಾಮಜ್ಯೋತಿಯನ್ನು ಬೆಳಗಿಸೋಣ. ಸತ್ಸಂಕಲ್ಪವನ್ನು ಮಾಡೋಣ. ಶೀಘ್ರವಾಗಿ ರಾಮ ಮಂದಿರ ನಿರ್ಮಾಣಗೊಂಡು ವಿಶ್ವಕ್ಕೆ ಮಾದರಿಯಾಗಲಿ. ಪ್ರಧಾನಮಂತ್ರಿಗಳಾದ ಮೋದಿಜಿಯವರ ಮೂಲಕ ಸುಮುಹೂರ್ತದಲ್ಲಿ ಶಿಲಾನ್ಯಾಸ ನಡೆಯುವುದು ಅರ್ಥಪೂರ್ಣವಾಗಿದೆ ಎಂದರು.

ರಾಮ ಪ್ರೇಮವೆಂದರೆ ಅದು ರಾಷ್ಟ್ರಪ್ರೇಮವೇ ಸರಿ. ರಾಮತತ್ತ್ವದಲ್ಲಿ ರಾಷ್ಟ್ರೀಯತೆಯನ್ನು ಬೆಳಗುವ ಶಕ್ತಿಯಿದೆ. ಆಧ್ಯಾತ್ಮದ ಅಂದವಿದೆ. ನಾವೆಲ್ಲರೂ ಮಂದಿರ ನಿರ್ಮಾಣಕ್ಕೆ ಕೈಲಾದ ಸೇವೆಯನ್ನು ಆತ್ಮಾರ್ಥವಾಗಿ ಸಲ್ಲಿಸೋಣ. ಆತ್ಮಜ್ಞಾನಕ್ಕೆ ಇನ್ನೊಂದು ಹೆಸರಾದ ಆಂಜನೇಯನ ಅನುಗ್ರಹ ಜೊತೆಗಿರುವಾಗ ಎಲ್ಲವೂ ನಿರ್ವಿಘ್ನವಾಗಿ, ಸಾಂಗವಾಗಿ ನಡೆಯಲೆಂದು ಹಾರೈಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details