ಕರ್ನಾಟಕ

karnataka

ETV Bharat / state

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್​ ನೇಮಕಾತಿ: ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ 17 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆ ಭರ್ತಿ ಮಾಡಲಾಗುವುದು.

http://10.10.50.85:6060/reg-lowres/17-October-2023/job-1_1710newsroom_1697528525_289.jpg
http://10.10.50.85:6060/reg-lowres/17-October-2023/job-1_1710newsroom_1697528525_289.jpg

By ETV Bharat Karnataka Team

Published : Oct 17, 2023, 1:53 PM IST

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್​ನಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ 17 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆ ಭರ್ತಿ ಮಾಡಲಾಗುವುದು. ಆಯಾಯ ಗ್ರಾಮ ಅಥವಾ ತಾಲೂಕು ಪಂಚಾಯಿತಿ ನಿವಾಸಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ

ಹುದ್ದೆ ವಿವರ: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ 17 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಿರುವ ಗ್ರಾಮಗಳ ಪಟ್ಟಿ ಇಂತಿದೆ. ಅತಿಕಾರಿ ಬೆಟ್ಟು ಇರುವೈಲ್​, ಇರ್ವತ್ತೂರು, ಕಡಿರುದ್ಯಾವರ, ಕಡ್ಯ - ಕೊಣಾಜೆ, ಕೆಯ್ಯೂರು, ನಿಡ್ಪಳ್ಳಿ, ಬಡಗ ಎಡಪದವು, ಮಣಿನಾಲ್ಕೂರು, ಮಲ್ಲೂರು, ಮಾಣಿಲ, ವಾಲ್ಪಾಡಿ, ಸಜಿಪಪಡು, ಸಾಲೆತ್ತೂರು, ಸುಲ್ಕೇರಿ, ಮಾಣಿ

ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆ ಮತ್ತು ಸರ್ಟಿಫಿಕೇಷನ್​ ಕೋರ್ಸ್​ ಇನ್​​ ಲೈಬ್ರರಿ ಸೈನ್ಸ್​ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್​ ಕೋರ್ಸ್​ ಉತ್ತೀರ್ಣರಾಗಿರಬೇಕು.

ಸರ್ಟಿಫಿಕೇಷನ್​ ಕೋರ್ಸ್​ ಇನ್​ ಲೈಬ್ರರಿ ಸೈನ್ಸ್​ ಪದವಿ ಪಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುವುದು.

ವಿಶೇಷ ಸೂಚನೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ಈ ಸಂಬಂದ ತಹಶೀಲ್ದಾರ್​​ ಅವರಿಂದ ವಾಸಸ್ಥಳ ಪ್ರಮಾಣ ಪತ್ರವನ್ನು ಪಡೆದು ಅರ್ಜಿ ಜೊತೆ ಸಲ್ಲಿಸಬೇಕು

ವಯೋಮಿತಿ:ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷದವರೆಗೆ ವಯೋಮಿತಿ ಸಡಿಲಿಕೆ ನಡೆಸಲಾಗುವುದು. ಆಯ್ಕೆ: ಮೆರಿಟ್​ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುವುದು.

ಅರ್ಜಿ ಸಲ್ಲಿಕೆ:ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 200 ರೂ, ವಿಕಲಚೇತನ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ಪಾವತಿಸಬೇಕಿದೆ. ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಕ್ಯೂ ಆರ್​ ಕೋಡ್​ ಅಥವಾ ಬ್ಯಾಂಕ್​ ಮೂಲಕವೂ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಅಭ್ಯರ್ಥಿಗಳು ಅಕ್ಟೋಬರ್​ 16ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 6 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಸವಿವರಕ್ಕೆzpdk.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ 496 ಹುದ್ದೆಗಳಿಗೆ ನೇಮಕಾತಿ: ಪದವಿ ಆದವರಿಗೆ ಇದೆ ಭಾರಿ ಅವಕಾಶ

ABOUT THE AUTHOR

...view details