ಕರ್ನಾಟಕ

karnataka

ETV Bharat / state

ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವಿಫಲ: ಸಮಾನ ಮನಸ್ಕ ಸಂಘಟನೆಗಳ ಆರೋಪ - protest

ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಬಡವರ ಪರಿಸ್ಥಿತಿ ಶೋಚನೀಯವಾಗಿದೆ. ಜನರ ಸಂಕಷ್ಟಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಬಂಟ್ವಾಳ ತಾಲೂಕಿನ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯಿಂದ ಬಿ.ಸಿ. ರೋಡಿನ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಯಿತು.

ಸಮಾನ ಮನಸ್ಕ ಸಂಘಟನೆಗಳ ಪ್ರತಿಭಟನೆ
ಸಮಾನ ಮನಸ್ಕ ಸಂಘಟನೆಗಳ ಪ್ರತಿಭಟನೆ

By

Published : Aug 4, 2020, 5:19 PM IST

ಬಂಟ್ವಾಳ (ಮಂಗಳೂರು):ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಬಡವರ ಪರಿಸ್ಥಿತಿ ಶೋಚನೀಯವಾಗಿದೆ. ಜನರ ಸಂಕಷ್ಟಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಬಂಟ್ವಾಳ ತಾಲೂಕಿನ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮಂಗಳವಾರ ಬಿ.ಸಿ. ರೋಡಿನ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಯಿತು.

ಸಮಾನ ಮನಸ್ಕ ಸಂಘಟನೆಗಳ ಪ್ರತಿಭಟನೆ

ಲಾಕ್​ಡೌನ್​ನಿಂದಾಗಿ ರಾಜ್ಯದ ವಿವಿಧ ಕ್ಷೇತ್ರದಲ್ಲಿ ದುಡಿಯುವ ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಪರಿಹಾರ ಧನಸಹಾಯ ಸಮರ್ಪಕವಾಗಿ ಬಿಡುಗಡೆ ಮಾಡಿಲ್ಲ. ಆಧಾರ್ ಕಾರ್ಡ್ ಇದ್ದರೆ ಸಾಕು, ದ.ಕ. ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿಗೆ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತದೆ ಎಂದು ಸರ್ಕಾರದ ಉಸ್ತುವಾರಿ ಮಂತ್ರಿಗಳು ಹೇಳಿದ್ದರು. ಆದರೆ ಖಾಸಗಿ ಆಸ್ಪತ್ರೆಗಳ ಶುಲ್ಕ ದುಬಾರಿಯಾಗುವ ಬಗ್ಗೆ ದೂರುಗಳಿವೆ. ಕೊರೊನಾ ಹೆಸರಲ್ಲಿ ಭಯ ಹುಟ್ಟಿಸುವುದನ್ನು ನಿಯಂತ್ರಿಸಿ, ಮೂಲಸೌಕರ್ಯ ಹೆಚ್ಚಿಸಿ, ಕ್ವಾರಂಟೈನ್ ಕೇಂದ್ರಗಳ ಸಹಿತ ಬಡವರಿಗೆ ಸರಿಯಾದ ಸೌಕರ್ಯಗಳನ್ನು ಒದಗಿಸಿ ಎಂದು ಮನವಿ ಮಾಡಲಾಯಿತು.

ಅಧ್ಯಕ್ಷ ಬಿ.ಎಂ. ಪ್ರಭಾಕರ ದೈವಗುಡ್ಡೆ, ಪ್ರಧಾನ ಕಾರ್ಯದರ್ಶಿ ಬಿ.ಶೇಖರ್ ನೇತೃತ್ವದಲ್ಲಿ ಈ ಸಂಬಂಧ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಮುಖಂಡರಾದ ರಾಮಣ್ಣ ವಿಟ್ಲ, ಸುರೇಶ್ ಕುಮಾರ್, ನ್ಯಾಯವಾದಿ ಚಂದ್ರಶೇಖರ ಪೂಜಾರಿ, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಹಾರೂನ್ ರಶೀದ್, ಲೋಕೇಶ್ ಸುವರ್ಣ, ಪ್ರಕಾಶ್ ಶೆಟ್ಟಿ ತುಂಬೆ ಶ್ರೀಶೈಲ, ಪುರಸಭಾ ಸದಸ್ಯ ಲೋಲಾಕ್ಷ ಶೆಟ್ಟಿ, ಸುರೇಂದ್ರ ಕೋಟ್ಯಾನ್, ಬಾಬು ಭಂಡಾರಿ, ಲೋಕೇಶ ಪೂಜಾರಿ, ಇಸ್ಮಾಯಿಲ್ ಕೆಳಗಿನಪೇಟೆ, ಶರೀಫ್ ಮಧ್ವ, ಸರಸ್ವತಿ ಕಡೇಶಿವಾಲಯ, ಪ್ರೇಮನಾಥ ಕೆ, ಉದಯ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

...view details