ಮಂಗಳೂರು: ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಗಡಿ ಭಾಗದಲ್ಲಿರುವ ಮದ್ಯದಂಗಡಿಗಳನ್ನು ಆಗಸ್ಟ್ 15ರ ವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಕೇರಳದಲ್ಲಿ ಕೊರೊನಾ ಪ್ರಕರಣ ತೀವ್ರವಾಗಿ ಹೆಚ್ಚಳವಾಗಿದ್ದು ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದೆ ಗಡಿಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯ ಗಡಿಭಾಗದ ಜನತೆ ಮದ್ಯಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮದ್ಯದಂಗಡಿಗಳನ್ನು ಅವಲಂಬಿಸಿದ್ದಾರೆ. ಈ ಕಾರಣದಿಂದ ಗಡಿಭಾಗದಲ್ಲಿರುವ ಜಿಲ್ಲೆಯ 5 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.