ಕರ್ನಾಟಕ

karnataka

ETV Bharat / state

ದ.ಕನ್ನಡದಲ್ಲಿ 2ನೇ ಹಂತದ ಲಾಕ್​​​​ಡೌನ್: ಮಸೀದಿಗಳಲ್ಲಿ ಶುಕ್ರವಾರದ ಜುಮಾ ಕೂಡ ಇಲ್ಲ - ದಕ್ಷಿಣ ಕನ್ನಡ ಕೊರೊನಾ ಸುದ್ದಿ

ಒಂದು ವಾರಗಳ ಕಾಲದ ಈ ಲಾಕ್​ಡೌನ್​ಗೆ ಆರಂಭದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಲಾಕ್​ಡೌನ್​ ಸಂದರ್ಭದಲ್ಲಿ ಎಲ್ಲ ಧರ್ಮದ ಪ್ರಾರ್ಥನಾ ಕೇಂದ್ರಗಳಿಗೆ ತೆರಳಲು ಅವಕಾಶ ಇಲ್ಲ.‌ ಅದರಂತೆ ಇಂದು ಶುಕ್ರವಾರ ಆಗಿರುವುದರಿಂದ ಮಸೀದಿಯಲ್ಲಿ ಶುಕ್ರವಾರ ಜುಮಾ ಸೇರಿದಂತೆ ಸಾಮೂಹಿಕ ಪ್ರಾರ್ಥನೆಗಳು ಇರುವುದಿಲ್ಲ.

mangalore
mangalore

By

Published : Jul 17, 2020, 11:32 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡನೇ ಹಂತದ ಲಾಕ್​ಡೌನ್​ಗೆ ಎರಡನೇ ದಿನವೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಕೊರೊನಾ ಸೋಂಕಿನ ಪ್ರಕರಣ ಹೆಚ್ಚಳವಾಗುತ್ತಿರುವುದು, ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಎರಡನೇ ಹಂತದ ಲಾಕ್​ಡೌನ್​​ ಅನ್ನು ಜಿಲ್ಲಾಡಳಿತ ಘೋಷಿಸಿತ್ತು.

ಒಂದು ವಾರಗಳ ಕಾಲದ ಈ ಲಾಕ್​ಡೌನ್​ಗೆ ಆರಂಭದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರಿಗೆ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿದೆ. ಕೃಷಿ, ಆರೋಗ್ಯ, ಸರಕಾರಿ ಕಚೇರಿಗಳ ಮತ್ತು ತುರ್ತು ಅಗತ್ಯಗಳನ್ನು ಹೊರತುಪಡಿಸಿ ಕಟ್ಟುನಿಟ್ಟಿನ ಲಾಕ್​ಡೌನ್ ಇದೆ.

ದ.ಕ ಜಿಲ್ಲೆಯಲ್ಲಿ ಎರಡನೇ ಹಂತದ ಲಾಕ್​​ಡೌನ್

ಬೆಳಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ದಿನಸಿ ಅಂಗಡಿಗಳನ್ನ ತೆರೆಯಲು ಅವಕಾಶವಿದೆ. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪೊಲೀಸರು ಲಾಕ್​ಡೌನ್​ ಯಶಸ್ವಿಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ.

ಲಾಕ್​ಡೌನ್​ ಸಂದರ್ಭದಲ್ಲಿ ಎಲ್ಲ ಧರ್ಮದ ಪ್ರಾರ್ಥನಾ ಕೇಂದ್ರಗಳಿಗೆ ತೆರಳಲು ಅವಕಾಶ ಇಲ್ಲ.‌ ಅದರಂತೆ ಇಂದು ಶುಕ್ರವಾರ ಆಗಿರುವುದರಿಂದ ಮಸೀದಿಯಲ್ಲಿ ಶುಕ್ರವಾರ ಜುಮಾ ಸೇರಿದಂತೆ ಸಾಮೂಹಿಕ ಪ್ರಾರ್ಥನೆಗಳು ಇರುವುದಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನಿನ್ನೆ ಒಂದೇ ದಿನ 238 ಪ್ರಕರಣಗಳು ದೃಢಪಟ್ಟಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ. ದ.ಕ ಜಿಲ್ಲೆಯಲ್ಲಿ ಈವರೆಗೆ 2,763 ಪ್ರಕರಣಗಳು ದೃಢಪಟ್ಟಿದ್ದು, ಇದರಲ್ಲಿ1,537 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದು ವಾರಗಳ ಕಾಲ ನಡೆಯುವ ಲಾಕ್​ಡೌನ್​ನಿಂದ ಪ್ರಕರಣಗಳ ಸಂಖ್ಯೆ ಇಳಿಮುಖವಾಗಬಹುದು ಎಂದು ನಿರೀಕ್ಷಿಸಲಾಗಿದೆ.

ABOUT THE AUTHOR

...view details