ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಲಾಕ್ಡೌನ್ ಮುಂದುವರೆಯುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ದ.ಕನ್ನಡ ಜಿಲ್ಲೆಯಲ್ಲಿ ಲಾಕ್ಡೌನ್ ಮುಂದುವರೆಸುವುದಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ - Dakshina Kannada news
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಗುರುವಾರದಿಂದ ಒಂದು ವಾರಗಳ ಕಾಲ ಲಾಕ್ಡೌನ್ ಮಾಡಲಾಗಿತ್ತು. ಈ ಲಾಕ್ಡೌನ್ ನಾಳೆಗೆ ಕೊನೆಗೊಳ್ಳಲಿದೆ, ಮತ್ತೆ ಮುಂದುವರೆಸುವುದಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಗುರುವಾರದಿಂದ ಒಂದು ವಾರಗಳ ಕಾಲ ಲಾಕ್ಡೌನ್ ಮಾಡಲಾಗಿತ್ತು. ಈ ಲಾಕ್ಡೌನ್ ನಾಳೆಗೆ ಕೊನೆಗೊಳ್ಳಲಿದ್ದು, ಇದನ್ನು ಮುಂದುವರಿಸುವ ಬಗ್ಗೆ ಇಂದು ಸಂಜೆ ತೀರ್ಮಾನಿಸಲಾಗುವುದು ಎಂದು ಸಚಿವರು ಬೆಳಗ್ಗೆ ತಿಳಿಸಿದ್ದರು.
ಈ ಬಗ್ಗೆ ಮಾತನಾಡಿದ ಅವರು ಮುಖ್ಯಮಂತ್ರಿಗಳ ನಿರ್ದೇಶನದಂತೆ ಬುಧವಾರದವರೆಗೆ ಲಾಕ್ಡೌನ್ ಇರಲಿದೆ. ಗುರುವಾರದಿಂದ ಲಾಕ್ಡೌನ್ ತೆರವುಗೊಳಿಸಲಾಗುತ್ತದೆ. ಗುರುವಾರದಿಂದ ಜಿಲ್ಲೆಯಲ್ಲಿ ಎಲ್ಲಾ ಅಂಗಡಿ-ಮುಂಗಟ್ಟುಗಳು ತೆರೆದಿರುತ್ತದೆ. ವಾಣಿಜ್ಯ ವ್ಯವಹಾರಗಳು ಸರಾಗವಾಗಿರುತ್ತದೆ ಎಂದು ತಿಳಿಸಿದರು.