ಕರ್ನಾಟಕ

karnataka

ETV Bharat / state

ಮಂಗಳೂರಿನಲ್ಲಿ ಲೋಕಾಯುಕ್ತ ದಾಳಿ.. ಲಂಚ ಪಡೆಯುತ್ತಿದ್ದ ವೇಳೆ ರೆಡ್​ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿ

ಮಂಗಳೂರು ತಹಶೀಲ್ದಾರ್ ಅವರ ಸಹಾಯಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಾನಂದ ನಾಟೇಕರ್ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಎಸಿಬಿ ರದ್ದಾಗಿ ಲೋಕಾಯುಕ್ತಕ್ಕೆ ಮತ್ತೆ ಅಧಿಕಾರ ಸಿಕ್ಕಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಪ್ರಕರಣ ಇದಾಗಿದೆ.

Representative image
ಸಾಂದರ್ಭಿಕ ಚಿತ್ರ

By

Published : Oct 1, 2022, 7:41 AM IST

ಮಂಗಳೂರು:ಎಸಿಬಿಯನ್ನು ಲೋಕಾಯುಕ್ತಕ್ಕೆ ವಿಲೀನಗೊಳಿಸಿದ ಬಳಿಕ ಮಂಗಳೂರಿನಲ್ಲಿ ಮೊದಲ ದಾಳಿಯಲ್ಲಿ ಅಧಿಕಾರಿಯೊಬ್ಬರು ಬಲೆಗೆ ಬಿದ್ದಿದ್ದಾರೆ. ಶಿವಾನಂದ ನಾಟೇಕರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿ.

ಮಂಗಳೂರು ತಹಶಿಲ್ದಾರ್ ಅವರ ಸಹಾಯಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಾನಂದ ನಾಟೇಕರ್ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ವ್ಯಕ್ತಿಯೊಬ್ಬರಿಗೆ ಭೂಮಿ ಮಾರಾಟ ಸಂಬಂಧ ನಿರಾಪೇಕ್ಷಣಾ ಪತ್ರ ನೀಡಲು ಈತ 10 ಸಾವಿರ ರೂ. ಲಂಚ ಕೇಳಿದ್ದರು. ಈ ಬಗ್ಗೆ ಆ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರು ನೀಡಿದ ವ್ಯಕ್ತಿಯಿಂದ ನಿನ್ನೆ(ಶುಕ್ರವಾರ) ನಗರದ ಮಿನಿ ವಿಧಾನಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಯಲ್ಲಿ ಎನ್‌ಒಸಿಗಾಗಿ 4700 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಲೋಕಾಯುಕ್ತ ಎಸ್​ಪಿ ಲಕ್ಷ್ಮಿ ಗಣೇಶ್ ಹಾಗೂ ಡಿವೈಎಸ್‌ಪಿ ಚೆಲುವರಾಜ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಇದನ್ನೂ ಓದಿ:ಹೈಕೋರ್ಟ್ ಆದೇಶದನ್ವಯ ಎಸಿಬಿ ರದ್ದು ಮಾಡಿ ಸರ್ಕಾರ ಅಧಿಕೃತ ಆದೇಶ

ABOUT THE AUTHOR

...view details