ಕರ್ನಾಟಕ

karnataka

ETV Bharat / state

ಸುಳ್ಯದಲ್ಲಿ ಲಾರಿ-ಬಸ್ ಮುಖಾಮುಖಿ ಡಿಕ್ಕಿ: ಗಾಯಾಳು ಚಾಲಕ ಸಾವು - ETv Bharat news

ಸುಳ್ಯದ ಕಲ್ಲುಗುಂಡಿ ಸಮೀಪ ಬಸ್‌ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

Driver killed in lorry-bus collision
ಲಾರಿ ಬಸ್ಸು ಮುಖಾಮುಖಿ ಗಾಯಳು ಚಾಲಕ ಸಾವು

By

Published : Nov 16, 2022, 9:39 AM IST

ಸುಳ್ಯ:ಬಸ್‌ ಹಾಗೂ ಲಾರಿ ನಡುವೆ ರಸ್ತೆ ಅಪಘಾತ ಸಂಭವಿಸಿ ಲಾರಿ ಚಾಲಕ ಮೃತಪಟ್ಟ ಘಟನೆ ಇಲ್ಲಿನ ಕಲ್ಲುಗುಂಡಿ ಸಮೀಪ ನಡೆದಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಲಾರಿ ಚಾಲಕ ಎರಡೂ ವಾಹನಗಳ ಮಧ್ಯೆ ಸಿಲುಕಿಕೊಂಡಿದ್ದರು ಎಂದು ತಿಳಿದುಬಂದಿದೆ.

ತಕ್ಷಣವೇ ಸ್ಥಳೀಯರು ಸೇರಿ ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಚಾಲಕನ ಹೊರತೆಗೆದು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಥಮ ಚಿಕಿತ್ಸೆ ನೀಡಿ ಮೈಸೂರಿನ ಆಸ್ಪತ್ರೆಗೆ ರವಾನಿಸುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಮಹಿಳೆ ಸಜೀವ ದಹನ

ABOUT THE AUTHOR

...view details