ಮಂಗಳೂರು: ಐಷಾರಾಮಿ ಕಾರು ಮಾರಾಟ ಪ್ರಕರಣದ ಆರೋಪಿಗಳಾದ ಸಿಸಿಬಿ ಪೊಲೀಸರ ವಿರುದ್ಧದ ಸಿಐಡಿ ತನಿಖೆ ಈಗಾಗಲೇ ಆರಂಭಗೊಂಡಿದ್ದು, ಮಂಗಳವಾರ ನಗರಕ್ಕೆ ಆಗಮಿಸಿರುವ ಸಿಐಡಿ ಇನ್ ಸ್ಪೆಕ್ಟರ್ ಚಂದ್ರಪ್ಪ ವಿಚಾರಣೆಯನ್ನು ಚುರುಕುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ಅಮಾನತಾಗಿರುವ ನಾಲ್ವರು ಸಿಸಿಬಿ ಪೊಲೀಸ್ ಅಧಿಕಾರಿಗಳಾದ ಕಬ್ಬಾಳ್ ರಾಜ್, ರಾಮಕೃಷ್ಣ, ಸಿಸಿಬಿ ಸಿಬ್ಬಂದಿ ಆಶಿತ್ ಡಿಸೋಜ ಹಾಗೂ ರಾಜಾ ಅವರ ವಿಚಾರಣೆ ನಡೆಸಲಾಗುತ್ತಿದೆ. ಅಲ್ಲದೆ ಹಿಂದಿನ ಸಿಸಿಬಿ ಇನ್ ಸ್ಪೆಕ್ಟರ್ ಶಿವಪ್ರಕಾಶ್, ಎಎಸ್ಐ ಹರೀಶ್ ಹಾಗೂ ಎಲ್ಲಾ ಸಿಬ್ಬಂದಿ ವಿಚಾರಣೆ ನಡೆಸಲಾಗಿದೆ ಎನ್ನಲಾಗಿದೆ.