ಕರ್ನಾಟಕ

karnataka

ETV Bharat / state

ಇಡಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಪುತ್ತೂರಿನ ಮಹೇಶ್ ಕಜೆ ನೇಮಕ - ವಿಶೇಷ ಸರ್ಕಾರಿ ಅಭಿಯೋಜಕರಾಗಿ ಮಹೇಶ್ ಕಜೆ ನೇಮಕ

ಮಹೇಶ್ ಕಜೆ ಅವರು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷ, ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿಯೂ ಕೆಲಸ ನಿರ್ವಹಿಸಿದ್ದಾರೆ.

Mahesh Kaje appointed as a Special Prosecutor
ವಿಶೇಷ ಸರ್ಕಾರಿ ಅಭಿಯೋಜಕರಾಗಿ ಮಹೇಶ್ ಕಜೆ ನೇಮಕ

By

Published : May 14, 2022, 5:33 PM IST

ಪುತ್ತೂರು (ದಕ್ಷಿಣ ಕನ್ನಡ):ಜಾರಿ ನಿರ್ದೇಶನಾಲಯ (ಇಡಿ)ದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯ ಪ್ರಕರಣಗಳ ವಿಚಾರಣೆಯಲ್ಲಿ ಸರ್ಕಾರದ ಪರ ವಾದ ಮಂಡಿಸಲು ವಿಶೇಷ ಸರ್ಕಾರಿ ಅಭಿಯೋಜಕರಾಗಿ ನ್ಯಾಯವಾದಿ ಮಹೇಶ್ ಕಜೆ ನೇಮಕಗೊಂಡಿದ್ದಾರೆ.

ಜಾರಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕ ರಿತೇಶ್ ಕುಮಾರ್, ಈ ಬಗ್ಗೆ ಟ್ವೀಟ್ ಮಾಡಿದ್ದು, ಬೆಂಗಳೂರಿನ ಶಾಂತಿನಗರ ಬಿಎಂಟಿಸಿ ಬಿ ಬ್ಲಾಕ್‌ನಲ್ಲಿರುವ ಬೆಂಗಳೂರು ವಲಯದ ಇಡಿ ಕಚೇರಿಗೆ ಹಾಜರಾಗಿ ಇಡಿ ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳನ್ನು ಸ್ವೀಕರಿಸುವಂತೆ ಸೂಚಿಸಿದ್ದಾರೆ.

ವಿಶೇಷ ಸರ್ಕಾರಿ ಅಭಿಯೋಜಕರಾಗಿ ಮಹೇಶ್ ಕಜೆ ನೇಮಕ

ಉಪ್ಪಿನಂಗಡಿ ಸಮೀಪದ ಕೇದಾರ ನಿವಾಸಿಯಾಗಿರುವ ಮಹೇಶ್, ಬೊಳುವಾರು ಕಜೆ ಲಾ ಚೇಂಬರ್ಸ್​​ನ ಮುಖ್ಯಸ್ಥರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿದ್ಧಾರೆ. ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿಯೂ ಕೆಲಸ ನಿರ್ವಹಿಸಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಮಾಜಿ ಸದಸ್ಯ, ಜೆಸಿಐ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.

ಇದನ್ನೂ ಓದಿ:ಖಂಡಿಗೆ ಧರ್ಮ ಅರಸು ಉಳ್ಳಾಯ ದೈವಸ್ಥಾನದ ನದಿಯಲ್ಲಿ ಮೀನು ಹಿಡಿಯುವ ಜಾತ್ರೆ: ಭಕ್ತರ ಸಂಭ್ರಮ

ABOUT THE AUTHOR

...view details