ಕರ್ನಾಟಕ

karnataka

ETV Bharat / state

ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ: 10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌ - ದಿನೇಶ್ ಅಮೀನ್

ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದು ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

man-arrested-after-10-years
ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

By

Published : Aug 18, 2021, 9:42 AM IST

ಮಂಗಳೂರು:10ವರ್ಷಗಳ ಹಿಂದೆ ಅಪ್ರಾಪ್ತೆಯನ್ನು ರಿಕ್ಷಾದಲ್ಲಿ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರಿನ ಬಜ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕನ್ನಡಿಕಟ್ಟೆ-ಮೇಲಂತಬೆಟ್ಟು ನಿವಾಸಿ ಮನೋಜ್ ಬಿ. ಶೆಟ್ಟಿ ಎಂಬಾತ ಬಂಧನಕ್ಕೊಳಗಾದ ಆರೋಪಿ. ಈತ 2011ರ ಜೂನ್ 24ರಂದು ಬಜ್ಪೆ ಠಾಣೆ ವ್ಯಾಪ್ತಿಯ 7ನೇ ತರಗತಿಯ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ರಿಕ್ಷಾದಲ್ಲಿ ತಮ್ಮ ಮನೆಗೆ ಕರೆದೊಯ್ದಿದ್ದ. ಆರೋಪಿ ಮನೋಜ್ ಶೆಟ್ಟಿ ಮತ್ತು ಆತನ ಸ್ನೇಹಿತ ದಿನೇಶ್ ಅಮೀನ್ ಎಂಬುವರು ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಘಟನೆ ಕುರಿತು ಅಪ್ರಾಪ್ತೆಯ ತಾಯಿ ನೀಡಿದ ದೂರಿನ ಆಧಾರದಲ್ಲಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜಾಮೀನು ಪಡೆದು ತಲೆಮರೆಸಿಕೊಂಡ ಆರೋಪಿ

ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಉಚ್ಚ ನ್ಯಾಯಾಲಯದಲ್ಲಿ ಜಾಮೀನು ಪಡೆದ ಆರೋಪಿ ಮನೋಜ್ ಬಿ. ಶೆಟ್ಟಿ ವಿಚಾರಣೆಯ ಸಮಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು 2ನೇ ಆರೋಪಿ ದಿನೇಶ್ ಅಮೀನ್ ಎಂಬಾತನಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿತ್ತು.

ಆದರೆ ಪ್ರಮುಖ ಆರೋಪಿ ಮನೋಜ್ ಬಿ. ಶೆಟ್ಟಿ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿರುವುದರಿಂದ ಆತನ ವಿರುದ್ಧ ‘ಎಲ್‌ಪಿಸಿ’ ವಾರೆಂಟ್ ಹೊರಡಿಸಲಾಗಿತ್ತು. ಆರೋಪಿ ಮನೋಜ್ ಶೆಟ್ಟಿ ಸುಮಾರು 10 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನ ಕನ್ನಡಿಕಟ್ಟೆ ಮತ್ತು ಮೇಲಂತಬೆಟ್ಟು ಎಂಬಲ್ಲಿ ತನ್ನ ಹೆಸರು ಮೋಹನ್ ಎಂಬುದಾಗಿ ಬದಲಾಯಿಸಿಕೊಂಡು ವಾಸಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:ಮಗಳನ್ನು ದೂಧಗಂಗಾ ನದಿಗೆ ತಳ್ಳಿ ಕೊಂದ ಪಾಪಿ ತಂದೆ

ABOUT THE AUTHOR

...view details