ಮಂಗಳೂರು :ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಅಲಂಪಾಡಿನ ನೀವಾಸಿ ಇಬ್ರಾಹಿಂ ಪನಲಂ ಅಬ್ದುಲ್ ಎಂಬಾತ ಗೋಲ್ಡ್ ಸ್ಮಗ್ಲಿಂಗ್ ಮಾಡಿ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಈತ ನಿನ್ನೆ ಸಂಜೆ ದುಬೈನಿಂದ ಮಂಗಳೂರಿಗೆ ಸ್ಪೈಸ್ ಜೆಟ್ ವಿಮಾನದಲ್ಲಿ ಬಂದಿದ್ದ. ಈತನನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಿದಾಗ ಅಕ್ರಮವಾಗಿ ಸಾಗಿಸುತ್ತಿದ್ದ 647 ಗ್ರಾಂ. ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ರೂ 30.73 ಲಕ್ಷ ರೂ ಎಂದು ಅಂದಾಜಿಸಲಾಗಿದೆ.