ಸುಳ್ಯ(ದಕ್ಷಿಣ ಕನ್ನಡ): ಪಿಸ್ತೂಲಿನಿಂದ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.
ಇವರು ಸುಳ್ಯ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶಾಂತಿ ಪ್ರಭುರವರ ಪತಿಯಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಕೇಶವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.