ಕರ್ನಾಟಕ

karnataka

ETV Bharat / state

ಕಡಬ: ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಆತ್ಮಹತ್ಯೆ ಶಂಕೆ - ಕಡಬ: ರೈಲಿನಡಿಗೆ ಬಿದ್ದು ವ್ಯಕ್ತಿ ಸಾವು

ಕಬಕ ಪುತ್ತೂರು-ಸುಬ್ರಹ್ಮಣ್ಯ ರೋಡ್ ರೈಲ್ವೆ ಹಳಿ ಬಳಿ ವ್ಯಕ್ತಿಯೋರ್ವ ರೈಲಿನಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ.

Man died in Railway track
ಕಡಬ: ರೈಲಿನಡಿಗೆ ಬಿದ್ದು ವ್ಯಕ್ತಿ ಸಾವು

By

Published : Mar 16, 2020, 1:02 PM IST

ಕಡಬ: ಕಡಬ ತಾಲೂಕಿನ 102 ನೇ ನೆಕ್ಕಿಲಾಡಿ ಗ್ರಾಮದ ಕೋರಿಯರ್ ಎಂಬಲ್ಲಿನ ಕಬಕ ಪುತ್ತೂರು-ಸುಬ್ರಹ್ಮಣ್ಯ ರೋಡ್ ರೈಲ್ವೆ ಹಳಿ ಬಳಿ ವ್ಯಕ್ತಿಯೋರ್ವ ರೈಲಿನಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ.

102ನೇ ನೆಕ್ಕಿಲಾಡಿ ಗ್ರಾಮದ ಕೊರಿಯರ್ ನಿವಾಸಿ ಸುಂದರ(35) ಮೃತ. ಕೊರಿಯರ್ ಗೇಟ್ ಹಾಗೂ ಬಜಕೆರೆ ರೈಲ್ವೆ ಸ್ಟೇಷನ್ ನಡುವಿನ ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಈ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡನೋ ಅಥವಾ ಆಕಸ್ಮಿಕವಾಗಿ ಬಿದ್ದು ಪ್ರಾಣ ಕಳೆದು ಕೊಂಡಿದ್ದಾನೋ ಎಂಬ ಕುರಿತ ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ತಿಳಿಯಲಿದೆ.

ABOUT THE AUTHOR

...view details