ಕರ್ನಾಟಕ

karnataka

ETV Bharat / state

ಕೊರೊನಾ 2ನೇ ಅಲೆ ಭೀತಿಯಲ್ಲಿ ದಕ್ಷಿಣ ಕನ್ನಡ: ಇಂದು ಓರ್ವ ಬಲಿ - ದಕ್ಷಿಣ ಕನ್ನಡದಲ್ಲಿ ಓರ್ವ ಬಲಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮಾ.10 ರಂದು ಓರ್ವ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವುದು ವರದಿಯಾಗಿತ್ತು. ಇದರ ಬಳಿಕ ಇದೀಗ ಮತ್ತೋರ್ವ ಸಾವನ್ನಪ್ಪಿರುವುದು ವರದಿಯಾಗಿದೆ.

dakshina kannada
ಕೊರೊನಾ 2ನೇ ಅಲೆ ಭೀತಿಯಲ್ಲಿ ದಕ್ಷಿಣ ಕನ್ನಡ: ಇಂದು ಓರ್ವ ಬಲಿ

By

Published : Mar 22, 2021, 11:18 PM IST

ಮಂಗಳೂರು: ಕೊರೊನಾ 2ನೇ ಅಲೆಯ ಭೀತಿ ದಕ್ಷಿಣ ಕನ್ನಡ ಜಿಲ್ಲೆಗೆ ಆವರಿಸಿದ್ದು, ಈ ನಡುವೆ ಕೊರೊನಾದಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಮಾ.10ರಂದು ಓರ್ವ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವುದು ವರದಿಯಾಗಿತ್ತು. ಅದರ ಬಳಿಕ ಇದೀಗ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿರುವುದು ವರದಿಯಾಗಿದೆ. ಕೊರೊನಾ ಆರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ಪ್ರತಿ ದಿನ ವರದಿಯಾಗುತ್ತಿತ್ತು. ಒಂದೇ ದಿನದಲ್ಲಿ 10ಕ್ಕಿಂತಲೂ ಹೆಚ್ಚಿನ ಸಾವಿನ ಪ್ರಕರಣಗಳು ವರದಿಯಾಗಿದ್ದವು. ಬಳಿಕ ಕೊರೊನಾ ಗಣನೀಯವಾಗಿ ಕಡಿಮೆಯಾಗಿ ಸಾವು ಸಂಭವಿಸಿರಲಿಲ್ಲ. ಆದರೆ ಮಾರ್ಚ್ ತಿಂಗಳಲ್ಲಿ ಎರಡು ಪ್ರಕರಣಗಳು ವರದಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ ಇದೀಗ 742ಕ್ಕೆ ಏರಿಕೆಯಾಗಿದೆ. ಇತ್ತೀಚಿಗೆ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು 31 ಪಾಸಿಟಿವ್ ಪ್ರಕರಣ ವರದಿಯಾಗಿವೆ. ಸದ್ಯ 527 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ಮನೆ ಹಾಗೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details