ಕರ್ನಾಟಕ

karnataka

ETV Bharat / state

ಸುಳ್ಯವನ್ನು ಬೆಚ್ಚಿ ಬೀಳಿಸಿದ ಶೂಟೌಟ್ ಪ್ರಕರಣ, ಓರ್ವ ಸಾವು

ಸುಳ್ಯ ನಗರದ ಶಾಂತಿನಗರ ಎಂಬಲ್ಲಿ ಇಂದು ಮುಂಜಾನೆ ಶೂಟೌಟ್ ನಡೆದಿದ್ದು, ಸ್ಥಳೀಯ ವ್ಯಕ್ತಿಯೋರ್ವರಿಗೆ ಕಾರಿನಲ್ಲಿ ಬಂದ ಅಪರಿಚಿತರು ಗುಂಡಿಕ್ಕಿದ್ದಾರೆ. ಗುಂಡೇಟು ತಗಲಿದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

sullia
sullia

By

Published : Oct 8, 2020, 11:17 AM IST

ಸುಳ್ಯ (ದಕ್ಷಿಣ ಕನ್ನಡ):ಇಂದು ಬೆಳ್ಳಂಬೆಳಗ್ಗೆ ಶೂಟೌಟ್ ನಡೆದಿದ್ದು, ಸುಳ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ.

ಸುಳ್ಯ ನಗರದ ಶಾಂತಿನಗರ ಎಂಬಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಸ್ಥಳೀಯ ವ್ಯಕ್ತಿಯೋರ್ವರಿಗೆ ಕಾರಿನಲ್ಲಿ ಬಂದ ಅಪರಿಚಿತರು ಗುಂಡಿಕ್ಕಿದ್ದಾರೆ. ಗುಂಡೇಟು ತಗುಲಿದ ವ್ಯಕ್ತಿಯನ್ನು ಸಂಪತ್ ಎಂದು ಗುರುತಿಸಲಾಗಿದೆ.

ಮೃತ ಸಂಪತ್

ಘಟನೆಯಲ್ಲಿ ಸಾವಿಗೀಡಾದ ಸಂಪತ್‌ ಬಿಜೆಪಿ‌ ಹಾಗೂ ಸಾಮಾಜಿಕ ಮುಖಂಡ ಬಾಲಚಂದ್ರ ಕಳಗಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಇಂದು ಬೆಳಗ್ಗೆ ಸುಮಾರು 6 ಗಂಟೆಗೆ ಈತ ತನ್ನ ನಿವಾಸದಿಂದ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಅಲ್ಲಿಗೆ ಬಂದ ದುಷ್ಕರ್ಮಿಗಳು ಆತನ ಮೇಲೆ ದಾಳಿ ನಡೆಸಿದ್ದಾರೆ.

ಮೊದಲು ಕಾರಿನ ಗ್ಲಾಸಿಗೆ ಗುಂಡು ಹಾರಿಸಿದ್ದಾರೆ. ಆ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡ್​ಗೆ ತಾಗಿ ನಿಂತಿದೆ. ಅಲ್ಲಿಂದ ತಪ್ಪಿಸಿಕೊಂಡ ಸಂಪತ್ ಸಮೀಪದಲ್ಲಿದ್ದ ಕಾಂತಪ್ಪ ಎಂಬವರ ಮನೆಗೆ ಓಡಿ ಹೋಗಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿಗೂ ದುಷ್ಕರ್ಮಿಗಳು ಹಿಂಬಾಲಿಸಿಕೊಂಡು ಬಂದು ಗುಂಡು ಹಾರಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಚಂದ್ರ ಜೋಗಿ, ಎಸ್​ಐ ಹರೀಶ್ ಹಾಗು ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನಾಲ್ಕು ಜನರ ತಂಡದಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ABOUT THE AUTHOR

...view details