ಉಳ್ಳಾಲ (ಮಂಗಳೂರು):ಇಂದು ಬೆಳಗ್ಗೆ ಸೇತುವೆಯ ಮೇಲಿಂದ ವ್ಯಕ್ತಿಯೊಬ್ಬರು ನೇತ್ರಾವತಿ ನದಿಗೆ ಹಾರಿದ ಘಟನೆ ದ.ಕ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ.
ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ.. ಆತ್ಮಹತ್ಯೆ ಶಂಕೆ! - ಉಳ್ಳಾಲ ಮಂಗಳೂರು ಲೆಟೆಸ್ಟ್ ನ್ಯೂಸ್
ಬೆಳಗ್ಗೆ ಸೇತುವೆಯ ಮೇಲಿಂದ ವ್ಯಕ್ತಿಯೊಬ್ಬರು ನೇತ್ರಾವತಿ ನದಿಗೆ ಹಾರಿದ ಘಟನೆ ದ.ಕ. ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ.
Man jumped in to river
ಕೊರೊನಾ ಮಹಾಮಾರಿಯಿಂದಾಗಿ ಉಳ್ಳಾಲ ಠಾಣಾ ಪೊಲೀಸರು ಕ್ವಾರಂಟೈನ್ನಲ್ಲಿದ್ದ ಕಾರಣ ಘಟನಾ ಸ್ಥಳಕ್ಕೆ ಮಂಗಳೂರು ನಗರ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ನೀರಿಗೆ ಹಾರಿದ ವ್ಯಕ್ತಿಯ ವಿವರಗಳು ಇನ್ನೂ ತಿಳಿದು ಬಂದಿಲ್ಲ. ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಶೋಧ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ.