ಬಂಟ್ವಾಳ: ತನ್ನ ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಅಣ್ಣನೇ ತಮ್ಮನನ್ನು ಹತ್ಯೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ನಡೆದಿದೆ.
ಅಕ್ರಮ ಸಂಬಂಧ ಶಂಕೆ: ಅಡಕೆ ಸಲಾಕೆಯಿಂದ ಹೊಡೆದು ತಮ್ಮನನ್ನೇ ಕೊಂದ ಅಣ್ಣ - Man kills younger brother suspecting illicit affair with wife
ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ ತಮ್ಮನನ್ನೇ ಅಣ್ಣ ಅಡಕೆ ಸಲಾಕೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.
ಶುಕ್ರವಾರ ಮಧ್ಯರಾತ್ರಿ ಸುಂದರ (30) ಎಂಬಾತನನ್ನು ಆತನ ಅಣ್ಣ ರವಿ ಅಡಕೆ ಸಲಾಕೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಅಣ್ಣ- ತಮ್ಮನ ಮಧ್ಯೆ ಆಗಾಗ ಜಗಳವಾಗುತ್ತಿತ್ತು. ಶುಕ್ರವಾರ ಮನೆಯಲ್ಲಿ ತಾಯಿಯ ವರ್ಷಾಂತಿಕ ಪೂಜೆ ನಡೆಸಲಾಯಿತು. ರಾತ್ರಿ ಊಟ ಮಾಡಿದ ನಂತರ ಎಂದಿನಂತೆ ರವಿ ಮತ್ತು ಸುಂದರ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಸುಂದರನ ತಲೆಗೆ ಅಣ್ಣ ಅಡಕೆ ಸಲಾಕೆಯಿಂದ ಏಟು ಕೊಟ್ಟಿದ್ದು, ಪರಿಣಾಮ ತಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಂತರ ಸಲಾಕೆಯನ್ನು ಪಕ್ಕದಲ್ಲೇ ಬಿಸಾಡಿ ರವಿ ಪರಾರಿಯಾಗಿದ್ದಾನೆ.
ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ರವಿ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.