ಕರ್ನಾಟಕ

karnataka

ETV Bharat / state

ಕೊರೊನಾ ಶಂಕೆ: ಮಂಗಳೂರಿನಲ್ಲಿ 88 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ - Throat Fluid Sample send to test

ಕೊರೊನಾ ಶಂಕೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 88 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಈವರೆಗೆ 4,330 ಮಂದಿಯ ಗಂಟಲು ದ್ರವ ಪಡೆಯಲಾಗಿದ್ದು, 3,611 ಮಂದಿಯ ವರದಿ ಬಂದಿದೆ.

88 people  Throat Fluid Sample  send to test
ಮಂಗಳೂರಿನಲ್ಲಿ 88 ಮಂದಿಯ ಗಂಟಲು ದ್ರವ ಸ್ಯಾಂಪಲ್ ಪರೀಕ್ಷೆಗೆ ರವಾನೆ

By

Published : May 10, 2020, 9:22 PM IST

ಮಂಗಳೂರು:ಕೊರೊನಾ ಶಂಕೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 88 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ.

ಮಂಗಳೂರಿನಲ್ಲಿ 88 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ
ಹಿಂದೆ ಪರೀಕ್ಷೆಗೆಂದು ಕಳುಹಿಸಿರುವ 190 ಮಂದಿಯ ಗಂಟಲು ದ್ರವದ ವರದಿ ಎಲ್ಲವೂ ನೆಗೆಟಿವ್ ಬಂದಿದ್ದು, ಇಂದು ದ.ಕ ಜಿಲ್ಲೆಯಲ್ಲಿ ಯಾವುದೇ ಸೋಂಕು ದೃಢಪಟ್ಟಿಲ್ಲ. 184 ಮಂದಿಯ ವರದಿ ಬರಬೇಕಾಗಿದ್ದು, ಒಟ್ಟು 15 ಮಂದಿ ನಿಗಾದಲ್ಲಿದ್ದಾರೆ. 40 ಮಂದಿಯನ್ನು ಮಂಗಳೂರಿನ ಇಎಸ್ಐ ಹಾಸ್ಪಿಟಲ್​ನಲ್ಲಿ ಕ್ವಾರಂಟೈನ್​ನಲ್ಲಿ ಇರಿಸಲಾಗಿದ್ದು, 32 ಮಂದಿಯನ್ನು ಸುರತ್ಕಲ್​ನ ಎನ್ಐಟಿಕೆಯಲ್ಲಿ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ. ವೆನ್ಲಾಕ್ ಆಸ್ಪತ್ರೆಯ ಕ್ವಾರಂಟೈನ್​ನಲ್ಲಿ ಯಾರೂ ಇಲ್ಲ. ಒಟ್ಟು 6,073 ಮಂದಿ 28 ದಿನಗಳ ಹೋಂ ಕ್ವಾರಂಟೈನ್ ಮುಗಿಸಿದ್ದಾರೆ. ಇಂದು 32 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಮಂಗಳೂರಿನಲ್ಲಿ ಈವರೆಗೆ 40,526 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ.

ಈವರೆಗೆ 4,330 ಮಂದಿಯ ಗಂಟಲು ದ್ರವ ಪಡೆಯಲಾಗಿದ್ದು, 3,611 ಮಂದಿಯ ವರದಿ ಬಂದಿದೆ. 31 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 13 ಮಂದಿ ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನು 15 ಮಂದಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೂವರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details