ಮಂಗಳೂರು: ದುಬಾರಿ ಬೆಲೆಯ ವಾಚ್ವೊಂದರ ಮಾರಾಟಕ್ಕೆ ಬಂದಿದ್ದ ವ್ಯಕ್ತಿಯನ್ನು ವಿಚಾರಿಸಲು ಹೋಗಿದ್ದ ಪೊಲೀಸ್ ಸಿಬ್ಬಂದಿಗೆ ಕಳ್ಳತನದ ಆರೋಪಿ ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ನಗರದ ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಾಸರಗೋಡು ಮೂಲದವನೆಂದು ಪರಿಚಯ ಮಾಡಿಕೊಂಡ ವ್ಯಕ್ತಿ ನಗರದ ವಾಚ್ ಅಂಗಡಿಯೊಂದಕ್ಕೆ ಸೋಮವಾರ ಸಂಜೆ 6.15ರ ಸುಮಾರಿಗೆ ಆಗಮಿಸಿದ್ದಾನೆ. ಈತ ತನ್ನ ಬಳಿಯಿದ್ದ ದುಬಾರಿ ವಾಚ್ವೊಂದನ್ನು ಮಾರಾಟಕ್ಕೆ ಯತ್ನಿಸಿದ್ದಾನೆ. ಆತ ಅನುಮಾನಾಸ್ಪದವಾಗಿ ಕಂಡು ಬಂದಿದ್ದ ಕಾರಣ ಅಂಗಡಿಯವರು ಬಂದರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಬಂದರು ಪೊಲೀಸ್ ಠಾಣೆಯ ಸಿಬ್ಬಂದಿ ಆತನನ್ನು ವಶಕ್ಕೆ ಪಡೆಯಲು ಬಂದಿದ್ದಾರೆ. ಆಗ ಆರೋಪಿ ಹೆಡ್ ಕಾನ್ಸ್ಟೇಬಲ್ ವಿನೋದ್ ಎಂಬುವರಿಗೆ ಚೂಪಾದ ಆಯುಧದಿಂದ ಇರಿದು ಪರಾರಿಯಾಗಿದ್ದಾನೆ.