ಮಂಗಳೂರು:ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ನನ್ನು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ಬಳಿಕ 10 ದಿನಗಳ ಕಾಲ ಮಂಗಳೂರು ಪೊಲೀಸರ ವಶಕ್ಕೆ ನೀಡಿ ನ್ಯಾ. ಕೆ ಎನ್ ಕಿಶೋರ್ಕುಮಾರ್ ಆದೇಶ ಹೊರಡಿಸಿದ್ದಾರೆ.
ಮಂಗಳೂರು ಬಾಂಬ್ ಪ್ರಕರಣ: ಆರೋಪಿ ಆದಿತ್ಯ ರಾವ್ 10 ದಿನ ಪೊಲೀಸ್ ವಶಕ್ಕೆ - 10ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಕೋರ್ಟ್ ಆದೇಶ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ನನ್ನು 10 ದಿನಗಳ ಕಾಲ ಮಂಗಳೂರು ಪೊಲೀಸರ ವಶದಲ್ಲಿ ಇಡಬೇಕೆಂದು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್. ಕಿಶೋರ್ಕುಮಾರ್ ಆದೇಶ ಹೊರಡಿಸಿದ್ದಾರೆ.
ನಿನ್ನೆ ರಾತ್ರಿಯಿಂದ ಪಣಂಬೂರಿನಲ್ಲಿರುವ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿದ್ದ ಆರೋಪಿ ಆದಿತ್ಯ ರಾವ್ನನ್ನು ಪೊಲೀಸರು ಬಿಗಿ ಬಂದೋಬಸ್ತ್ಲ್ಲಿ ವಿಶೇಷ ಭದ್ರತಾ ವಾಹನದ ಮೂಲಕ ನ್ಯಾಯಾಲಯಕ್ಕೆ ಕರೆತಂದಿದ್ದರು.
ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿಯೇ ವೈದ್ಯಕೀಯ ಪರೀಕ್ಷೆ ನಡೆಸಿ, ಆರೋಪಿ ಸದೃಢನಾಗಿರುವುದು ಸಾಬೀತಾದ ಬಳಿಕ ಆತನನ್ನು ತನಿಖಾಧಿಕಾರಿ ಬೆಳ್ಳಿಯಪ್ಪ ನೇತೃತ್ವದ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಅಲ್ಲದೆ ಆರೋಪಿಯು ಸ್ಫೋಟಕ ತಯಾರಿಸಲು ಚೆನ್ನೈನಿಂದ ರಾಸಾಯನಿಕವನ್ನು ತರಿಸಿಕೊಂಡ ಹಿನ್ನೆಲೆಯಲ್ಲಿ ಮುಂದಿನ ಹತ್ತು ದಿನಗಳ ಒಳಗಡೆ ಆರೋಪಿಯನ್ನು ತನಿಖಾ ತಂಡ ಚೆನ್ನೈಗೆ ಕರೆದುಕೊಂಡು ಹೋಗಲಿದೆ.