ಕರ್ನಾಟಕ

karnataka

ETV Bharat / state

ಮಂಗಳೂರು ಸಿಟಿ ಸಂಪೂರ್ಣ ಬ್ಲಾಕ್: ಪರದಾಡುತ್ತಿರುವ ವಾಹನ ಸವಾರರು

ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಗರದ ಹಂಪನಕಟ್ಟೆ ರಸ್ತೆ ಕಾಂಕ್ರೀಟಿಕರಣ ಮತ್ತು ಒಳಚರಂಡಿ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ನವಭಾರತ್ ಸರ್ಕಲ್ ಕಡೆಯಿಂದ ಹಂಪನಕಟ್ಟೆ ಕಡೆಗೆ ಪ್ರವೇಶಿಸುವ ಎಲ್ಲ ವಾಹನ ಸಂಚಾರ ನಿಷೇಧಿಸಲಾಗಿದೆ.

ಮಂಗಳೂರು ಸಿಟಿ ಸಂಪೂರ್ಣ ಬ್ಲಾಕ್
ಮಂಗಳೂರು ಸಿಟಿ ಸಂಪೂರ್ಣ ಬ್ಲಾಕ್

By

Published : Nov 9, 2020, 7:50 PM IST

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಗರದ ಹಂಪನಕಟ್ಟೆ ರಸ್ತೆ ಕಾಂಕ್ರೀಟಿಕರಣ ಮತ್ತು ಒಳಚರಂಡಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಹಂಪನಕಟ್ಟೆ ಸುತ್ತಮುತ್ತ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಹಿನ್ನೆಲೆ ಇಂದು ನಗರದಲ್ಲಿ ಸಂಪೂರ್ಣ ಬ್ಲಾಕ್ ಆಗಿದ್ದು, ವಾಹನ ಸವಾರರು‌ ಪರದಾಡುವಂತಾಯಿತು.

ಹಂಪನಕಟ್ಟೆ ಕಡೆಯಿಂದ ನವಭಾರತ್ ವೃತ್ತ ಕಡೆಗೆ ಏಕಮುಖ ವಾಹನ ಸಂಚಾರ ಇರಲಿದೆ. ನವಭಾರತ್ ಸರ್ಕಲ್ ಕಡೆಯಿಂದ ಹಂಪನಕಟ್ಟೆ ಕಡೆಗೆ ಪ್ರವೇಶಿಸುವ ಎಲ್ಲ ವಾಹನ ಸಂಚಾರ ನಿಷೇಧಿಸಲಾಗಿದೆ. ಹಂಪನಕಟ್ಟೆ ಕಡೆಯಿಂದ ಬಾವುಟ ಗುಡ್ಡೆ, ಫಳ್ನೀರ್ ಕಡೆಗೆ ಸಂಚರಿಸುವ ಎಲ್ಲ ವಾಹನಗಳು ಕೆ.ಎಸ್. ರಾವ್ ರಸ್ತೆಯ ಮೂಲಕ ಪಿವಿಎಸ್ ಕಡೆಗೆ ಹಾಗೂ ಅಂಬೇಡ್ಕರ್ ವೃತ್ತ ಮೂಲಕ ಮುಂದುವರೆಯಬೇಕು. ಅಂಬೇಡ್ಕರ್ ವೃತ್ತದ ಕಡೆಯಿಂದ ಹಂಪನಕಟ್ಟೆ ಕಡೆಗೆ ಬರುವ ಎಲ್ಲ ವಾಹನಗಳು ಬಲ್ಮಠ ರಸ್ತೆಯಲ್ಲಿರುವ ಅರವಿಂದ ಮೋಟಾರ್ಸ್ ಶೋರೂಂ ಎದುರಿನ ಮಿಲಾಗ್ರಿಸ್ ಕ್ರಾಸ್ ರಸ್ತೆ ಮೂಲಕ ಫಳ್ನೀರು ರಸ್ತೆ ಪ್ರವೇಶಿಸಿ ವೆನ್ಲಾಕ್ ಆಸ್ಪತ್ರೆಯ ಅಂಡರ್‌ಪಾಸ್ ರಸ್ತೆಯ ಮೂಲಕ ರೈಲ್ವೆ ಸ್ಟೇಶನ್ ರಸ್ತೆ ಮೂಲಕ ತಾಲೂಕು ಪಂಚಾಯತ್ ಕಚೇರಿ ಪಕ್ಕದ ಯು.ಪಿ. ಮಲ್ಯ ರಸ್ತೆಯ ಮೂಲಕ ಎ.ಬಿ. ಶೆಟ್ಟಿ ಸರ್ಕಲ್ ಕಡೆಗೆ ತೆರಳಬೇಕು.

ಮಂಗಳೂರು ಸಿಟಿ ಸಂಪೂರ್ಣ ಬ್ಲಾಕ್

ಮಿಲಾಗ್ರಿಸ್ ರಸ್ತೆಯಲ್ಲಿ ಎಲ್ಲ ರೀತಿಯ ವಾಹನ ನಿಲುಗಡೆ ನಿಷೇಧಿಸಲಾಗಿದೆ. ರೈಲ್ವೆ ಸ್ಟೇಷನ್‌ನಿಂದ ವೆನ್ಲಾಕ್ ಆಸ್ಪತ್ರೆಯ ಅಂಡರ್ ಪಾಸ್ ರಸ್ತೆ ಮೂಲಕ ಹಂಪನಕಟ್ಟೆ ಕಡೆಗೆ ಪ್ರವೇಶಿಸುವ ಎಲ್ಲ ವಾಹನಗಳ ಸಂಚಾರವನ್ನು ನಿಷೇಸಲಾಗಿದೆ. ಡಾ. ಅಂಬೇಡ್ಕರ್ ವೃತ್ತದ ಕಡೆಯಿಂದ ಬಾವುಟಗುಡ್ಡೆ ಕಡೆಗೆ ವಾಹನಗಳ ದ್ವಿಮುಖ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಗಿದೆ. ನ.8ರಿಂದ 2021ರ ಜನವರಿ 6ರವರೆಗೆ ಇದೇ ರೀತಿ ಇರಲಿದೆ ಎಂದು ಮಂಗಳೂರು ನಗರ ಪೊಲೀಸ್ ಆಯಕ್ತರು ಆದೇಶಿಸಿದ್ದಾರೆ.

ಪರಿಣಾಮ ಇಂದು ನಗರದ ಸುತ್ತಲೂ ಸಂಪೂರ್ಣ ವಾಹನ ದಟ್ಟಣೆ ಕಂಡು ಬಂದಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ವಾಹನ ಸವಾರರು ದಾವಾಂತದಲ್ಲಿ ಎಲ್ಲೆಲ್ಲಿ ವಾಹನಗಳನ್ನು ನುಗ್ಗಿಸಿ ಹೊರಟರೂ ಎತ್ತ ಕಡೆಗಳಲ್ಲಿ ನೋಡಿದರೂ ಬ್ಯಾರಿಕೇಡ್​​ಗಳನ್ನು ಹಾಕಿ ಪೊಲೀಸ್ ಬಿಗಿಬಂದೋಬಸ್ತ್​​ ಇರುವುದರಿಂದ ಬಂದ ದಾರಿಗೆ ಸುಂಕವಿಲ್ಲವೆಂಬಂತ ಪರಿಸ್ಥಿತಿ ಉಂಟಾಗಿದೆ. ಅಲ್ಲದೆ ಎಲ್ಲಾ ಕಡೆಗಳಲ್ಲಿ ರಸ್ತೆ ಅಗೆದು ಏಕಕಾಲದಲ್ಲಿ ಕಾಮಗಾರಿ ನಡೆಸುತ್ತಿರುವ ಜಿಲ್ಲಾಡಳಿತದ ವೈಖರಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ABOUT THE AUTHOR

...view details