ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿದ್ದು, ಸೆಪ್ಟೆಂಬರ್ 15ರವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್‍ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಸೂಚನೆ ನೀಡಿದರು.
ದ.ಕ.ಜಿಲ್ಲೆಯಲ್ಲಿ ಸೆ.15ರವರೆಗೆ ಸ್ನಾತಕ, ಸ್ನಾತಕೋತ್ತರ ತರಗತಿ ಆರಂಭಿಸದಂತೆ ಜಿಲ್ಲಾಧಿಕಾರಿ ಸೂಚನೆ - ಸ್ನಾತಕೋತ್ತರ ತರಗತಿ
ದ.ಕ ಜಿಲ್ಲೆಯಲ್ಲಿ ಸೆಪ್ಟೆಂಬರ್ 15ರವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್‍ಲೈನ್ ಮೂಲಕವಷ್ಟೇ ತರಗತಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ.
ಸ್ನಾತಕ ಮತ್ತು ಸ್ನಾತಕೋತ್ತರ ಭೌತಿಕ ತರಗತಿಗಳು ಆರಂಭಿಸುವ ಕುರಿತು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಸೆಪ್ಟೆಂಬರ್ 15ರೊಳಗೆ ಕಡಿಮೆಯಾದಲ್ಲಿ ಮತ್ತೊಮ್ಮೆ ಸಂಬಂಧಪಟ್ಟ ಕಾಲೇಜು ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಭೌತಿಕ ತರಗತಿಗಳನ್ನು ಪ್ರಾರಂಭಿಸಲು ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಗತಿಗಳನ್ನು ಬ್ಯಾಚ್‍ವೈಸ್ ಮೂಲಕ ಕೋವಿಡ್ ಮಾರ್ಗಸೂಚಿಗಳ ಅನುಸಾರವೇ ನಡೆಸಬೇಕು. ವಿಜ್ಞಾನ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ವಿಭಾಗಗಳ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕವೇ ತರಗತಿಗಳನ್ನು ನಡೆಸಬೇಕು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್ ನಿರೋಧಕ ಲಸಿಕೆ ಪಡೆದಿರಬೇಕು. ಲಸಿಕೆ ಪಡೆಯದ ಸಿಬ್ಬಂದಿಯ ಮಾಹಿತಿಯನ್ನು ಕಾಲೇಜು ಶಿಕ್ಷಣಾಧಿಕಾರಿಗಳು ನೀಡಬೇಕು. ನೆಟ್‍ವರ್ಕ್ ಸಮಸ್ಯೆಯಿಂದ ಗ್ರಾಮೀಣ ಭಾಗದ ಕೆಲವು ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳಿಗೆ ಹಾಜರಾಗುವುದು ಸಮಸ್ಯೆಯಾಗಿದೆ. ಹೀಗಾಗಿ ಜಿಲ್ಲಾಡಳಿತ ಪರ್ಯಾಯ ಮಾರ್ಗ ಹುಡುಕಿ ಅಂತಹ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುವ ವ್ಯವಸ್ಥೆ ಮಾಡಲಾಗುವುದು ಎಂದರು.