ಮಂಗಳೂರು:ಸಾಲಗಾರರ ಕಿರಿಕಿರಿ ತಾಳಲಾರದೆ ಉಳ್ಳಾಲ ಠಾಣಾ ವ್ಯಾಪ್ತಿಯ ಜೆಪ್ಪಿನ ಮೊಗರು ನೇತ್ರಾವತಿ ನದಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಬಿಂಬಿಸಲು ಬೈಕ್ಅನ್ನು ಸೇತುವೆ ಮೇಲೆ ನಿಲ್ಲಿಸಿ ಜನರಲ್ಲಿ ಗಾಬರಿ ಮೂಡಿಸಿದ್ದ ಯುವಕ ಶಿವಮೊಗ್ಗದಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ.
ಮುಡಿಪು ಸಮೀಪದ ಕುರ್ನಾಡು ನಿವಾಸಿ ಪ್ರವೀಣ್ ಸಫಲ್ಯ(28) ನಿನ್ನೆ ರಾತ್ರಿಯಿಂದ ನಾಪತ್ತೆಯಾಗಿದ್ದು, ಬೈಕ್ ನೇತ್ರಾವತಿ ಸೇತುವೆ ಮೇಲೆ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಮುಳುಗು ತಜ್ಞರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದರು. ಆದರೆ ಇಂದು ಮುಂಜಾನೆ ಆತ ಶಿವಮೊಗ್ಗಕ್ಕೆ ತೆರಳಿರುವ ಮಾಹಿತಿ ಲಭಿಸಿದೆ.