ಮಂಗಳೂರು: ನಗರದ ಮೀನುಗಾರಿಕಾ ಮಹಾವಿದ್ಯಾಲಯವು 50 ವರ್ಷವನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಮತ್ಸ್ಯದ ಚಿತ್ರವಿರುವ ಭಾರತೀಯ ಅಂಚೆ ಚೀಟಿಯನ್ನು ಮೀನುಗಾರಿಕೆ, ಬಂದರು, ಒಳನಾಡು ಜಲ ಸಾರಿಗೆ ಮತ್ತು ದ.ಕ. ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಿಡುಗಡೆ ಮಾಡಿದರು.
ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯ - ದ.ಕ. ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರು ನಗರದ ಮೀನುಗಾರಿಕಾ ಮಹಾವಿದ್ಯಾಲಯವು 50 ವರ್ಷವನ್ನು ಪೂರೈಸಿದ್ದು, ಈ ಸಂದರ್ಭದಲ್ಲಿ ಮತ್ಸ್ಯದ ಚಿತ್ರವಿರುವ ಭಾರತೀಯ ಅಂಚೆ ಚೀಟಿಯನ್ನು ದ.ಕ. ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಿಡುಗಡೆ ಮಾಡಿದರು.
ಕರಾವಳಿಯಲ್ಲಿ ಸಮುದ್ರ ಮೀನುಗಾರಿಕೆಗೆ ಮಾತ್ರವಲ್ಲದೆ ಒಳನಾಡು ಮೀನುಗಾರಿಕೆಗೂ ಆದ್ಯತೆ ನೀಡಬೇಕು. ಇಂದು ಮೀನಿನ ಸಂತತಿ ಹೆಚ್ಚಿಸಬೇಕಾಗಿರುವ ಅನಿವಾರ್ಯವಿದ್ದು ಮೀನು ಉತ್ಪಾದನೆ ಹೆಚ್ಚಿಸಬಹುದಾದ ತಾಂತ್ರಿಕತೆಯನ್ನು ವಿಜ್ಞಾನಿಗಳು ಕಂಡುಹಿಡಿಯಬೇಕಾಗಿದೆ. ಕೇಂದ್ರ ಸರ್ಕಾರದಿಂದ ಬಿಡುಗಡೆಗೊಂಡ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಇಂತಹ ಪದ್ಧತಿಗಳಿಗೆ ಪ್ರೋತ್ಸಾಹ ಕೊಡಬೇಕಾಗಿದೆ ಎಂದು ಸಚಿವರು ಹೇಳಿದರು.
ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ಕಾಲೇಜಿನ ಡೀನ್ ಡಾ.ಎ.ಸೆಂಥಿಲ್ ವೇಲ್, ಮಹಾನಗರಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ್, ಉಪಮೇಯರ್ ವೇದಾವತಿ, ಮಂಗಳೂರು ಮ.ನ.ಪಾ ಸದಸ್ಯೆ ರೇವತಿ ಶ್ಯಾಮಸುಂದರ್ ಮತ್ತು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಮುಹಮ್ಮದ್ ನಝೀರ್, ಸಹಾಯಕ ಪ್ರಾಧ್ಯಾಪಕ ಡಾ. ಕುಮಾರನಾಯ್ಕ ಎ.ಎಸ್. ಉಪಸ್ಥಿತರಿದ್ದರು.